ಚಿಕ್ಕಮಗಳೂರಿನ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಹೊರಗುತ್ತಿಗೆ ನೌಕರರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು. ಶಿವಮೂರ್ತಿ, ಹನುಮೇಗೌಡ, ರೇಖಾ, ವಿಶಾಲ, ರಂಗಸ್ವಾಮಿ, ಕುಮಾರಮ್ಮ, ದೊಡ್ಡಯ್ಯ, ಸೀತಮ್ಮ ಮತ್ತಿತರರಿದ್ದರು. 
ಜಿಲ್ಲೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹೊರಗುತ್ತಿಗೆ ನೌಕರರ ಪ್ರತಿಭಟನೆ

ಚಿಕ್ಕಮಗಳೂರು: ರಾಜ್ಯದ ಹಾಸ್ಟೆಲ್ ಮತ್ತು ವಸತಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರ ವೇತನ ಪಾವತಿ ವಿಳಂಬವಾಗುತ್ತಿದೆ ಹಾಗೂ ವಾರ್ಡನ್ ಮತ್ತು ಅಧಿಕಾರಿಗಳ ಕಿರುಕುಳ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಇದಕ್ಕೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿ ಹೊರಗುತ್ತಿಗೆ ನೌಕರರು ನಗರದ ಅಜಾದ್ ಪಾರ್ಕ್ ವೃತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಹೊರಗುತ್ತಿಗೆ ನೌಕರರಿಗೆ ಸರ್ಕಾರದಿಂದ ನೇರವಾಗಿ ವೇತನ ಪಾವತಿ ಮಾಡಬೇಕು ಇಎಸ್‌ಐ ಮತ್ತು ಇಪಿಎಫ್ ಸೌಲಭ್ಯ, ವಾರದ ರಜೆ ನೀಡಬೇಕು ಎಂದು ಒತ್ತಾಯಿಸಿದರು.
ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಬೇಕು. ಈಗಾಗಲೇ ಕೆಲಸದಿಂದ ತೆಗೆದಿರುವ ಸಿಬ್ಬಂದಿಗಳನ್ನು ಮತ್ತೆ ನೇಮಕ ಮಾಡಿಕೊಳ್ಳಬೇಕು. ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಪ್ರಮುಖರಾದ ಶಿವಮೂರ್ತಿ, ಹನುಮೇಗೌಡ, ರೇಖಾ, ವಿಶಾಲ, ರಂಗಸ್ವಾಮಿ, ಕುಮಾರಮ್ಮ, ದೊಡ್ಡಯ್ಯ, ಸೀತಮ್ಮ ಮತ್ತಿತರರಿದ್ದರು.