ಜಿಲ್ಲೆ

ಕೈ ಶಾಸಕರಿಂದಲೂ ಅನುದಾನಕ್ಕಾಗಿ ಪರದಾಟ : ಡಾ.ಭರತ್ ಶೆಟ್ಟಿ ವಾಗ್ದಾಳಿ

ಗುರುಪುರ: ರಾಜ್ಯದಲ್ಲಿ ಬೆಲೆ ಏರಿಕೆ, ಭ್ರಷ್ಟಾಚಾರದಿಂದ ಜನರ ಬದುಕು ಅಯೋಮಯವಾಗಿದೆ. ಅನುದಾನಕ್ಕಾಗಿ ಸ್ವತಃ ಕಾಂಗ್ರೆಸ್ ಶಾಸಕರೇ ಪರದಾಡುತ್ತಿದ್ದಾರೆ. ರಾಜ್ಯದ ಅಭಿವೃದ್ಧಿ ಹೀನಾಯ ಸ್ಥಿತಿಗೆ ತಲುಪಿದೆ ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ವಾಗ್ದಾಳಿ ನಡೆಸಿದರು.

ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮನಪಾ ಸುರತ್ಕಲ್ ಕಚೇರಿ ಮುಂಭಾಗ ಬಿಜೆಪಿ ಆಯೋಜಿಸಿದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು. ಮಾತೆತ್ತಿದರೆ ಕೋಮುವಾದದ ನೆಪ ಹೇಳಿ ಹಿಂದುಗಳ ಮೇಲೆ ಪೊಲೀಸ್ ಕೇಸ್ ಜಡಿಯುತ್ತಿದೆ. ಗೊಡ್ಡು ಬೆದರಿಕೆಗಳಿಗೆಲ್ಲ ಎದೆಗುಂದುವ ಪ್ರಶ್ನೆಯೇ ಇಲ್ಲ. ಬಿಜೆಪಿ ಸರ್ಕಾರವಿದ್ದಾಗ ರಾಜ್ಯ ಸಾಕಷ್ಟು ಅಭಿವೃದ್ಧಿ ಕಂಡಿತ್ತು ಎಂದರು.

40 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗಿ

ದಕ್ಷಿಣ ಕನ್ನಡ ಮತ್ತು ಅವಿಭಜಿತ ಉಡುಪಿ ಜಿಲ್ಲೆಯ 399 ಕಡೆಗಳಲ್ಲಿ ಏಕಕಾಲಕ್ಕೆ ಆಯೋಜಿಸಲಾದ ಪ್ರತಿಭಟನಾ ಸಭೆಯಲ್ಲಿ 40 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಪಾಲ್ಗೊಂಡಿದ್ದು, ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವುದು ರಾಜ್ಯ ರಾಜಕೀಯ ಇತಿಹಾಸದಲ್ಲಿ ದಾಖಲೆ ಎಂದು ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ಬಣ್ಣಿಸಿದರು.