ಗುಂಡ್ಲುಪೇಟೆ ಪಟ್ಟಣದ ಮಡಹಳ್ಳಿ ವೃತ್ತದಲ್ಲಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಡೆಕ್ ಕುಸಿದಿರುವ ಬಗ್ಗೆ ಕರ್ನಾಟಕ ಕಾವಲು ಪಡೆ ಸಂಘಟನೆಯ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. 
ಜಿಲ್ಲೆ

ಡೆಕ್ ಸರಿಪಡಿಸುವಂತೆ ಪ್ರತಿಭಟನೆ

ನಾಗೇಶ ಎಸ್

ಗುಂಡ್ಲುಪೇಟೆ: ಪಟ್ಟಣದ ಮಡಹಳ್ಳಿ ವೃತ್ತದಲ್ಲಿ ರಾಷ್ಟ್ರೀಯ ಹೆದ್ದಾರಿ ಬದಿಯ ರಸ್ತೆಯ ಡೆಕ್ ಕುಸಿದು 2 ತಿಂಗಳು ಕಳೆದರೂ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ವಹಿಸದೆ ನಿರ್ಲಕ್ಷೃ ವಹಿಸಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಕಾವಲು ಪಡೆ ಸಂಘಟನೆ ಪದಾಧಿಕಾರಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು.

ಸಂಘಟನೆಯ ತಾಲೂಕು ಅಧ್ಯಕ್ಷ ಅಬ್ದುಲ್ ಮಾಲೀಕ್ ನೇತೃತ್ವದಲ್ಲಿ ಡೆಕ್ ಕುಸಿದಿರುವ ಸ್ಥಳದಲ್ಲಿ ಪದಾಧಿಕಾರಿಗಳು ಜಮಾಯಿಸಿ, ಡೆಕ್ ಕುಸಿದು ಸಾರ್ವಜನಿಕರು ಪರದಾಡುತ್ತಿದ್ದರೂ ಲೋಕೋಪಯೋಗಿ ಇಲಾಖೆ ಸರಿಪಡಿಸಲು ಕ್ರಮಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಂತರ ಲೋಕೋಪಯೋಗಿ ಇಲಾಖೆ ಕಚೇರಿಗೆ ತೆರಳಿ, ಸಿಬ್ಬಂದಿ ಶ್ರೀನಿವಾಸ್ ಅವರಿಗೆ ಸಲ್ಲಿಸಿ, ದುರಸ್ತಿಗೆ ವಿಳಂಬ ಮಾಡಿದರೆ ಉಗ್ರ ಹೋರಾಟ ಮಾಡಲಾಗುವುದು ಎಚ್ಚರಿಕೆ ನೀಡಿದರು.

ಕಾವಲು ಪಡೆ ಕಾರ್ಯದರ್ಶಿ ಎಸ್.ಮುಬಾರಕ್, ಟೌನ್ ಉಪಾಧ್ಯಕ್ಷ ಸಾದಿಕ್ ಪಾಷ, ಗೌರವಾಧ್ಯಕ್ಷ ಶಕೀಲ್, ಕಸಬಾ ಹೋಬಳಿ ಘಟಕದ ಅಧ್ಯಕ್ಷ ಎಚ್.ರಾಜು, ಟೌನ್ ಸಂಚಾಲಕ ರಾಜು, ರಾಮೇಗೌಡ ಸೇರಿದಂತೆ ಹಲವರು ಇದ್ದರು.