ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಕಳಸಾ ಬಂಡೂರಿ ನಾಲಾ ತಿರುವು ಯೋಜನೆಯ ಜಾರಿಗೆ ಒತ್ತಾಯಿಸಿ ರೈತ, ಕಾರ್ವಿುಕ, ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಇಲ್ಲಿಯ ಕಿತ್ತೂರ ರಾಣಿ ಚನ್ನಮ್ಮ ವೃತ್ತದಲ್ಲಿ ಸೋಮವಾರ ಖಾಲಿ ಕೊಡದೊಂದಿಗೆ ಪ್ರತಿಭಟನೆ ನಡೆಸಿದರು. ಬೆಳಗಾವಿಯಲ್ಲಿ ಆರಂಭಗೊಂಡಿರುವ ಚಳಿಗಾಲದ ಅಧಿವೇಶನದಲ್ಲಿ ಈ ಕುರಿತು ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕೆಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಮಹದಾಯಿ ಕಳಸಾ ಬಂಡೂರಿ ಹೋರಾಟ ಸಮನ್ವಯ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರರ ಮುಖಾಂತರ ಮುಖ್ಯಮಂತ್ರಿಗೆ ಮನವಿ ರವಾನಿಸಲಾಯಿತು.
ನಮ್ಮ ಕರ್ನಾಟಕ ಸೇನೆ ಉತ್ತರ ಕರ್ನಾಟಕ ಅಧ್ಯಕ್ಷ ಅಮೃತ ಇಜಾರಿ, ಸಿಐಟಿಯು ರಾಜ್ಯ ಕಾರ್ಯದರ್ಶಿ ಮಹೇಶ ಪತ್ತಾರ, ಸಮಿತಿ ಗೌರವಾಧ್ಯಕ್ಷ ಶಿವಣ್ಣ ಹುಬ್ಬಳ್ಳಿ, ಎಐಟಿಯುಸಿ ಮುಖಂಡ ಎ.ಎಸ್. ಪೀರಜಾದೆ, ಟಿಯುಸಿಸಿ ಜಿಲ್ಲಾಧ್ಯಕ್ಷ ಅಶೋಕ ರ್ಬಾ, ಬಸವರಾಜ ದೇವರಮನಿ, ಚಿದಾನಂದ ಸವದತ್ತಿ, ವೀರಣ್ಣ ನೀರಲಗಿ, ಎನ್.ಎಚ್. ಪಾಟೀಲ, ಎಂ.ಎಚ್. ಮುಲ್ಲಾ, ಬಿ.ಐ. ಈಳಿಗೇರ, ಕತಾಲಸಾಬ ನದಾಫ್, ಫಕ್ಕೀರೇಶ ಹರಕುಣಿ, ಇತರರು ಇದ್ದರು.