ಬಳ್ಳಾರಿ: ಜಿಲ್ಲೆಯಲ್ಲಿ ಮೇ 5 ರಿಂದ 23 ರವರೆಗೆ ಮೂರು ಹಂತಗಳಲ್ಲಿ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆ ನಡೆಯಲಿದೆ. ಸಾರ್ವಜನಿಕರು ಕುಟುಂಬದ ಜಾತಿ, ಉಪಜಾತಿ ಹಾಗೂ ಇತರೆ ಮಾಹಿತಿಗಳನ್ನು ಗಣತಿದಾರರಿಗೆ ನಿಖರವಾಗಿ ನೀಡಬೇಕು ಎಂದು ಡಿಸಿ ಪ್ರಶಾಂತ ಕುಮಾರ ಮಿಶ್ರಾ ತಿಳಿಸಿದ್ದಾರೆ. ಸಮೀಕ್ಷೆ ಕುರಿತು ಮಾಹಿತಿ ಪಡೆಯಲು ದೂರವಾಣಿ ಸಂಖ್ಯೆ: 8277888866, 08392277100ಕ್ಕೆ ಸಂಪರ್ಕಿಸಬಹುದು.
ಇದನ್ನೂ ಓದಿ:ಪರಿಶಿಷ್ಟ ಜಾತಿ ಒಳ ಮೀಸಲಾತಿ ಗಣತಿ 5 ರಿಂದ
ಕ್ಷೇತ್ರವಾರು ನೋಡೆಲ್ ಅಧಿಕಾರಿಗಳ ನೇಮಕ: ಬಳ್ಳಾರಿ ನಗರ-ಜಿಲ್ಲಾ ಕೌಶಲಭಿವೃದ್ಧಿ ಅಧಿಕಾರಿ ಪ್ರಾಣೇಶ್ (ಮೊ.9686409096), ಬಳ್ಳಾರಿ ಗ್ರಾಮೀಣ-ಜಂಟಿ ಕೃಷಿ ನಿರ್ದೇಶಕ ಸೋಮಸುಂದರ್ (ಮೊ.8277930401), ಕಂಪ್ಲಿ-ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಭಾನುಮತಿ (ಮೊ.9986609038), ಸಿರಗುಪ್ಪ-ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಎ.ಕೆ.ಜಲಾಲಪ್ಪ (ಮೊ.8971177872), ಸಂಡೂರು-ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಸಂತೋಷ್ ಸಪ್ಪಂಡಿ (ಮೊ.9448999248) ಅವರನ್ನು ನೇಮಕ ಮಾಡಲಾಗಿದೆ.