ಜಿಲ್ಲೆ

ಗ್ರಾಮೀಣ ಭಾಗಕ್ಕೆ ಹೆಚ್ಚುವರಿ ಬಸ್ ಸೌಕರ್ಯ ಕಲ್ಪಿಸಿ

ರೋಣ: ಬಸ್‌ಗಳಲ್ಲಿ ಇತ್ತೀಚೆಗೆ ಪ್ರಯಾಣಿಕರ ಸಂಖ್ಯೆ ಭಾರಿ ಹೆಚ್ಚಳವಾಗಿದೆ. ಅಲ್ಲದೆ, ಬಸ್‌ಗಳು ಸಮಯಕ್ಕೆ ಸರಿಯಾಗಿ ಬಾರದಿರುವುದರಿಂದ ವಿದ್ಯಾರ್ಥಿಗಳು ಸಮಯ್ಕಕೆ ಸರಿಯಾಗಿ ತರಗತಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ.

ಕೊಡಲೆ ತಾಲೂಕಿನ ಹಾಗೂ ಗ್ರಾಮೀಣ ಭಾಗಗಳಿಗೆ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಬೇಕು ಎಂದು ಎಬಿವಿಪಿ ವತಿಯಿಂದ ತಹಸೀಲ್ದಾರ್‌ಗೆ ಬುಧವಾರ ಮನವಿ ಸಲ್ಲಿಸಲಾಯಿತು.

ರಾಜ್ಯ ಸರ್ಕಾರ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿದ್ದರಿಂದ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ.

ಇದರ ಪರಿಣಾಮ ನೇರವಾಗಿ ಶಾಲಾ-ಕಾಲೇಜ್ ವಿದ್ಯಾರ್ಥಿಗಳ ಮೇಲೆ ಬೀರಿದೆ. ಗ್ರಾಮೀಣ ಭಾಗದಿಂದ ಪಟ್ಟಣದ ಶಾಲಾ-ಕಾಳೇಜ್‌ಗೆ ಬರುವ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುವಂತಾಘಿದೆ. ಹೀಗಾಗಿ ಸರ್ಕಾರ ಸೂಕ್ತ ಕ್ರಮ ಕೈಗೊಮಡು ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಭೀಮು ಸೂಳಿಭಾವಿ, ಪರತಗೌಡ ಕೋಟೆಗೌಡ್ರ, ಸಂತೋಷ ಮಾಡಲಗೇರಿ, ಯಮನೂರ ಹೊಸಮನಿ, ಮಾಂತೇಶ ಪೂಜಾರ ಇತರರು ಇದ್ದರು.