ದೇವರಹಿಪ್ಪರಗಿ ತಾಲೂಕಿನ ಹುಣಶ್ಯಾಳ ಗ್ರಾಮದಲ್ಲಿ ವಿವಿಧ ಸಮಸ್ಯೆಗಳು ಹಾಗೂ ಕುಡಿಯುವ ನೀರಿಗಾಗಿ ಮಹಿಳೆಯರು ಖಾಲಿ ಕೊಡಗಳೊಂದಿಗೆ ಗ್ರಾಪಂಗೆ ಮುತ್ತಿಗೆ ಪ್ರತಿಭಟನೆ ನಡೆಸಿ ತಾಪಂ ಇಒ ಭಾರತಿ ಚೆಲವಯ್ಯ ಅವರಿಗೆ ಮನವಿ ಸಲ್ಲಿಸಿದರು. 
ಜಿಲ್ಲೆ

ಸಮರ್ಪಕ ಕುಡಿಯುವ ನೀರು ಪೂರೈಸಿ

Vijayapura - Desk - Gurappa Lokuri

ದೇವರಹಿಪ್ಪರಗಿ: ಹುಣಶ್ಯಾಳ ಗ್ರಾಮದಲ್ಲಿ ಸಮರ್ಪಕ ಕುಡಿಯುವ ನೀರು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಅಲ್ಲಿನ ಮಹಿಳೆಯರು ಖಾಲಿ ಕೊಡಗಳೊಂದಿಗೆ ಗ್ರಾಪಂಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿ ಬಳಿಕ ತಾಪಂ ಇಒ ಭಾರತಿ ಚೆಲುವಯ್ಯ ಅವರಿಗೆ ಮನವಿ ಸಲ್ಲಿಸಿದರು.

ಮುಖಂಡ ಟಿಪ್ಪುಸುಲ್ತಾನ್ ಸಿಪಾಯಿ ಮಾತನಾಡಿ, ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕು. ಅಲ್ಲದೆ, ಗ್ರಾಮದಿಂದ ವಿಜಯಪುರಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯನ್ನು ಸಿಸಿ ರಸ್ತೆಯನ್ನಾಗಿಸುವುದು, ಗ್ರಾಮದ ಚರಂಡಿಗಳ ಸ್ವಚ್ಛತೆ, ರಸ್ತೆ ಸುಧಾರಣೆಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಗ್ರಾಮದಲ್ಲಿ ಗ್ರಾಪಂ ದುರಾಡಳಿತದಿಂದ ಅಭಿವೃದ್ಧಿ ಕುಂಠಿತವಾಗಿದೆ. ಇಲ್ಲಿನ ಸಿಬ್ಬಂದಿಯನ್ನು ಕೂಡಲೇ ವಾರದಲ್ಲಿ ವರ್ಗ ಮಾಡದಿದ್ದರೆ ಗ್ರಾಪಂಗೆ ಬೀಗ ಜಡಿದು ಬೃಹತ್ ಪ್ರತಿಭಟನೆ ನಡೆಸಲಾಗುವುದೆಂದು ಎಚ್ಚರಿಕೆ ನೀಡಿದರು.

ಶಂಕ್ರೆಪ್ಪ ಬಂಗಾರಗುಂಡ, ಶಫೀಕ್ ಸಿಪಾಯಿ, ನಿಂಗಪ್ಪ ಪಾಕಿ, ಪರಶುರಾಮ ಬಡಿಗೇರ, ವಾಜೀದ್ ಉಸ್ತಾದ್, ಮೈನುದ್ದೀನ್ ಬಾಗವಾನ, ಇಬ್ರಾಹಿಂ ಹವಾಲ್ದಾರ್, ಶಕೀಲ ಪೊಲಾಸಿ, ಸದ್ದಾಂ ಬಿಂಜಲಭಾವಿ, ಇಸ್ಮಾಯಿಲ್ ಬಡೇಘರ, ಸದಾಂ ಪೊಲಾಸಿ, ಮುರ್ತುಜಾ ಸವಾರ, ಗಪ್ಪಾರ ಮೋಮಿನ್ ಹಾಗೂ ಮಹಿಳೆಯರು ಇದ್ದರು.