ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಹೆಸ್ಕಾಂ ಕಾರ್ಯ ಮತ್ತು ಪಾಲನೆ ವೃತ್ತ ಕಚೇರಿಯ ಅಧೀಕ್ಷಕ ಅಭಿಯಂತರ ಸಿದ್ದಣ್ಣ ಬೆಂಜಿಗೇರಿ ಅವರಿಗೆ ಮನವಿ ಸಲ್ಲಿಸಿದರು. ಸಂಗಮೇಶ ಸಗರ, ಸೋಮು ಬಿರಾದಾರ, ಮಹಾದೇವಪ್ಪ ತೇಲಿ ಮತ್ತಿತರರಿದ್ದಾರೆ. 
ಜಿಲ್ಲೆ

ಕೃಷಿ ಬಳಕೆಗೆ ಸಮರ್ಪಕ ವಿದ್ಯುತ್​ ಪೂರೈಸಿ

ಗಿರೀಶ ಸಗರ

ವಿಜಯಪುರ: ಸಮರ್ಪಕವಾಗಿ ವಿದ್ಯುತ್​ ಪೂರೈಸುವುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಹೆಸ್ಕಾಂ ಕಾರ್ಯ ಮತ್ತು ಪಾಲನೆ ವೃತ್ತ ಕಚೇರಿ ಅಧೀಕ್ಷಕ ಅಭಿಯಂತರ ಸಿದ್ದಣ್ಣ ಬೆಂಜಿಗೇರಿ ಮೂಲಕ ಹುಬ್ಬಳ್ಳಿಯ ಹೆಸ್ಕಾಂ ಎಂಡಿ, ಮುಖ್ಯಮಂತ್ರಿ ಹಾಗೂ ರಾಜ್ಯ ಇಂಧನ ಸಚಿವರಿಗೆ ಶನಿವಾರ ಮನವಿ ಸಲ್ಲಿಸಿದರು. ಬೇಸಿಗೆಯಲ್ಲಿ ರೈತರಿಗೆ ಯಾವುದೇ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಹಸಿರು ಸೇನೆ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮಾತನಾಡಿ, ಬಿರು ಬಿಸಿಲು ಹಾಗೂ ಬರದಿಂದ ತತ್ತರಿಸಿರುವ ಜಿಲ್ಲೆಯ ರೈತರಿಗೆ ಒಂದೆಡೆ ನೀರಿನ ಮಸ್ಯೆಯಾದರೆ, ವಿದ್ಯುತ್​ ಕಣ್ಣಾಮುಚ್ಚಾಲೆ ಹಾಗೂ ಸಿಂಗಲ್​ ಫೇಸ್​ ವಿದ್ಯುತ್​ ವಿತರಣೆಯಿಂದಾಗಿ ಅನ್ನದಾತರು ತೊಂದರೆ ಅನುಭವಿಸುವಂತಾಗಿದೆ.

ತೋಟದ ವಸ್ತಿಗಳಲ್ಲಿ ವಾಸಿಸುವ ರೈತರ ಮಕ್ಕಳಿಗೆ ಪರೀೆಗಳು ಹತ್ತಿರ ಬಂದಿರುವುದರಿಂದ ಅಭ್ಯಾಸ ಮಾಡುವುದಾದರು ಹೇಗೆ? ವಿಷಜಂತುಗಳು, ಕಾಡು ಪ್ರಾಣಿಗಳಿಂದಾಗಿ ರೈತರು ಜೀವ ಭಯದಲ್ಲಿದ್ದು, ಕೃಷಿ ಪಂಪ್​ಸೆಟ್​ಗಳಿಗೆ ಹಗಲು 12 ಗಂಟೆ ತ್ರೀಫೇಸ್​ ವಿದ್ಯುತ್​ ಹಾಗೂ ರಾತ್ರಿ ನಿರಂತರ ಮೊದಲಿನಂತೆ ಸಿಂಗಲ್​ ಫೇಸ್​ ವಿದ್ಯುತ್​ ಪೂರೈಸಬೇಕು ಎಂದು ಆಗ್ರಹಿಸಿದರು.

ರೈತರ ಐಪಿ ಸೆಟ್​ಗಳಿಗೆ ಆಧಾರ್​ ಕಾರ್ಡ್​ ಜೋಡಣೆ, ಸ್ವಯಂ ವೆಚ್ಚ ಯೋಜನೆ ಜಾರಿ ಮಾಡುತ್ತಿರುವುದು ತೀರಾ ಖಂಡನೀಯ. ವಿದ್ಯುತ್​ ಇಲಾಖೆಯನ್ನು ಖಾಸಗೀಕರಣ ಮಾಡುವ ಹುನ್ನಾರ ಇದರ ಹಿಂದೆ ಅಡಗಿದೆ ಎಂದು ದೂರಿದರು.

ಕೊಲ್ಹಾರ ತಾಲೂಕು ಅಧ್ಯಕ್ಷ ಸೋಮು ಬಿರಾದಾರ ಮಾತನಾಡಿ, ರೈತರೆಲ್ಲರೂ ಆರ್​ಆರ್​ ನಂಬರ್​ ಮಾಡಿಕೊಂಡು ಕೃಷಿ ಮಾಡುವ ಸ್ಥಿತಿಯಲ್ಲಿ ಇಲ್ಲ. ನೆರೆಯ ರಾಜ್ಯಗಳಲ್ಲಿ ರೈತರಿಗೆ 24 ತಾಸು ಉಚಿತ ವಿದ್ಯುತ್​ ವಿತರಣೆ ಮಾಡುತ್ತಿದ್ದು, ನಮ್ಮ ರಾಜ್ಯದಲ್ಲಿ ಕೂಡ ಅಂತಹ ಯೋಜನೆ ಜಾರಿಗೆ ತರಬೇಕು. ರಾಜ್ಯ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದ್ದು ಖಂಡನಾರ್ಹ ಮುಖ್ಯಮಂತ್ರಿ ಹಾಗೂ ಸಂಬಂಧಿಸಿದ ಸಚಿವರು ಚರ್ಚೆ ಮಾಡಿ ರೈತಪರ ರ್ನಿಣಯ ಕೈಗೊಳ್ಳಬೇಕು. ಇಲ್ಲದಿದ್ದರೆ, ರಾಜ್ಯ ವ್ಯಾಪಿ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಮಹಾದೇವಪ್ಪ ತೇಲಿ, ಅನಮೇಶ ಜಮಖಂಡಿ, ರಾಮಸಿಂಗ ರಜಪೂತ, ಸಿದ್ದನಗೌಡ ಪಾಟೀಲ, ರಾಜೇಸಾಬ ನದಾಫ ಮಾತನಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮನಗೌಡ ಪಾಟೀಲ, ಶ್ರೀಶೈಲ ವಾಲಿಕಾರ, ಮಕಬುಲ ಖೀಜಿ, ಎಂ.ಎಚ್​. ಪೂಜಾರಿ, ರಾಮಚಂದ್ರ ಪಾಟೀಲ, ರಾಮಚಂದ್ರ ಬಡಿಗೇರ, ಸಂಗಪ್ಪ ಟಕ್ಕೆ, ಬಸವರಾಜ ನ್ಯಾಮಗೊಂಡ, ಸಂಪತ್​ ಜಮಾದಾರ, ಶಾನೂರ ನಂದರಗಿ, ನಜೀರ ನಂದರಗಿ, ಚನ್ನು ಜಮಖಂಡಿ, ಬಸವರಾಜ ಮಸೂತಿ, ಕಲ್ಲಪ್ಪ ಪಾರಶೆಟ್ಟಿ, ಮಹಾಂತೇಶ ಮಮದಾಪುರ, ಮಲ್ಲಿಕಾರ್ಜುನ ೂಡೆಕಾರ ಮತ್ತಿತರರಿದ್ದರು.