ಜಿಲ್ಲೆ

ಕೃಷಿಕ ವರ್ಗಕ್ಕೆ ಸೂಕ್ತ ಮಾಹಿತಿ ದೊರಕಿಸಿ: ಡಾ.ಮಂತರ್ ಗೌಡ

ಮಡಿಕೇರಿ: ಇದೇ ಮೊದಲ ಬಾರಿಗೆ ಮಡಿಕೇರಿ ದಸರಾದಲ್ಲಿ ಆಯೋಜಿತ ಕಾಫಿ ದಸರಾವನ್ನು ಯಶಸ್ವಿಗೊಳಿಸುವುದರೊಂದಿಗೆ ಕೃಷಿಕ ವರ್ಗಕ್ಕೆ ಹೆಚ್ಚಿನ ಮಾಹಿತಿ ದೊರಕುವಂತಾಗಬೇಕೆಂದು ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್ ಗೌಡ ಸಲಹೆ ನೀಡಿದರು.


ಮಡಿಕೇರಿ ದಸರಾ ಉತ್ಸವದಲ್ಲಿ ಅ.೬ ಮತ್ತು ೭ ರಂದು ಆಯೋಜಿತ ಕಾಫಿ ದಸರಾ ಸಂಬಂಧಿತ ಜಿಲ್ಲೆಯ ವಿವಿಧ ಕಾಫಿ ಬೆಳೆಗಾರ ಸಂಘಟನೆಗಳ ಪ್ರಮುಖರು, ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಶಾಸಕ ಡಾ.ಮಂತರ್ ಗೌಡ, ಮಕ್ಕಳ ದಸರಾ, ಮಹಿಳಾ ದಸರಾ, ಯುವದಸರಾ, ಜಾನಪದ ದಸರಾದಂತೆಯೇ ಕಾಫಿ ದಸರಾ ಕೂಡ ಜನಾಕರ್ಷಣೆ ಪಡೆಯಬೇಕು. ಜಿಲ್ಲೆಯಾದ್ಯಂತಲಿನ ಕೃಷಿಕರಿಗೆ ಕಾಫಿ ದಸರಾ ಉತ್ಸವದ ಪ್ರಯೋಜನ ದೊರಕುವಂತಾಗಬೇಕು. ಕಾಫಿಗೆ ಸಂಬಂಧಿಸಿದ ಮಾಹಿತಿ ಮಾತ್ರವಲ್ಲದೇ ತೋಟಗಾರಿಕೆ ಬೆಳೆಗಳು, ಕೃಷಿ ಪದ್ದತಿ, ಜೇನು ಕೃಷಿ, ಬಿದಿರು ಕೃಷಿ, ಹೈನೋದ್ಯಮ, ಸೇರಿದಂತೆ ಪರ್ಯಾಯ ಕೃಷಿ ಮಾಹಿತಿಯೂ ಕಾಫಿ ದಸರಾದಲ್ಲಿ ದೊರಕಬೇಕೆಂದು ಸಲಹೆ ನೀಡಿದರು.


ಕಾಫಿ ಮಂಡಳಿ ಅಧ್ಯಕ್ಷರಾದ ದಿನೇಶ್ ಸೇರಿದಂತೆ ಕಾಫಿ ಮತ್ತು ಇತರ ಕೃಷಿ ತಜ್ಞರನ್ನೂ ಕಾಫಿ ದಸರಾಕ್ಕೆ ಆಹ್ವಾನಿಸಿ ಉತ್ತಮ ಮಾಹಿತಿಯನ್ನು ಬೆಳೆಗಾರರಿಗೆ ನೀಡಬೇಕು. ಕರ್ನಾಟಕ ಬೆಳೆಗಾರರ ಸಂಘ, ಕೊಡಗು ಪ್ಲಾಂಟರ್ಸ್ ಅಸೋಯೇ?ನ್, ಕಾಫಿ ಮಂಡಳಿ, ಸೇರಿದಂತೆ ಕೃಷಿಗೆ ಸಂಬಂಧಿಸಿದ ವಿವಿಧ ಸಂಘಟನೆಗಳೂ ಕಾಫಿ ದಸರಾದಲ್ಲಿ ಪಾಲ್ಗೊಂಡು ಜಿಲ್ಲೆಯ ಕೃಷಿ ಕ್ಷೇತ್ರಕ್ಕೆ ಪ್ರಯೋಜನಕಾರಿಯಾದ ಮಾಹಿತಿ ನೀಡುವಂತೆ ಕಾರ್ಯಕ್ರಮ ರೂಪಿಸಲೂ ಶಾಸಕರು ಸಲಹೆ ನೀಡಿದರು.


ಉತ್ತಮ ಗುಣಮಟ್ಟದಲ್ಲಿ ಮಳಿಗೆಗಳನ್ನು ನಿರ್ಮಿಸಿ, ಎಲ್ಲಾ ಸೌಲಭ್ಯ ಒದಗಿಸಬೇಕು. ಮಳಿಗೆಗಳಲ್ಲಿ ಕಾಫಿ ಕೆಫೆಯನ್ನು ಕೂಡ ತೆರೆಯುವ ಮೂಲಕ ಕಾಫಿ ಕ್ಷೇತ್ರದ ನವೀನತೆಯ ಪರಿಚಯ ಮಾಡಿಕೊಡಬೇಕೆಂದೂ ಮಂತರ್ ಗೌಡ ಹೇಳಿದರು.


ದಸರಾ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಎಚ್.ಟಿ.ಅನಿಲ್ ಮಾತನಾಡಿ, ೩೨ ಮಳಿಗೆಗಳಿಗೆ ಸ್ಳಳಾವಕಾಶ ಕಲ್ಪಿಸಲಾಗಿದೆ. ಅ.೬ ರಂದು ಬೆಳಗ್ಗೆ ೧೦ ಗಂಟೆಯಿಂದ ರಾತ್ರಿ ೭ ಗಂಟೆಯವರೆಗೆ ಮತ್ತು ೭ ರಂದು ಬೆಳಗ್ಗೆ ೧೦ ಗಂಟೆಯಿಂದ ಸಂಜೆ ೫ ಗಂಟೆವರೆಗೆ ಮಳಿಗೆಗಳನ್ನು ತೆರೆಯಲಾಗುತ್ತದೆ. ವೇದಿಕೆಯಲ್ಲಿನ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಮಸ್ಯೆಯಾಗದಂತೆ ಮಳಿಗೆಗಳನ್ನು ನಿರ್ವಹಿಸಲಾಗುತ್ತದೆ. ವೇದಿಕೆಯಲ್ಲಿ ಎರಡೂ ದಿನಗಳ ಕಾಲ ಮಧ್ಯಾಹ್ನ ೧೧ ಗಂಟೆಯಿಂದ ೧ ಗಂಟೆಯವರೆಗೂ ಕೃಷಿ ರಂಗಕ್ಕೆ ಸಂಬಂಧಿಸಿದ ವಿಚಾರಸಂಕಿರಣಗಳನ್ನು ಬೆಳೆಗಾರ ಸಂಘಟನೆಗಳ ಪ್ರಮುಖರೊಂದಿಗೆ ಚರ್ಚಿಸಿ ನಿರ್ಧರಿಸಲಾಗಿದೆ. ಭವಿ?್ಯದಲ್ಲಿ ಕಾಫಿ ಸೇರಿದಂತೆ ಕೃಷಿ ಕ್ಷೇತ್ರದ ಆಗುಹೋಗುಗಳ ಬಗ್ಗೆ ಕೃಷಿಕರಿಗೆ ತಜ್ಞರು ಮಾಹಿತಿ ನೀಡುವಂತೆ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಮಾಹಿತಿ ನೀಡಿದ ಅವರು, ಕಾಫಿ ದಸರಾಕ್ಕೆ ಸಂಬಂಧಿಸಿದ ಲೋಗೋವನ್ನು ಶೀಘ್ರದಲ್ಲಿಯೇ ಬಿಡುಗಡೆಗೊಳಿಸುವುದಾಗಿ ಹೇಳಿದರು.


ಕೊಡಗು ಪ್ಲಾಂಟರ್ಸ್ ಅಸೋಸಿಯೇ?ನ್ ಅಧ್ಯಕ್ಷ ನಂದಾ ಬೆಳ್ಯಪ್ಪ ಮಾತನಾಡಿ, ಕೊಡಗಿನ ಕಾಫಿ ಕೃಷಿಕರಿಗ ವಿವಿಧ ಕೃಷಿ ವಿಚಾರದಲ್ಲಿ ಸೂಕ್ತ ಮಾಹಿತಿ ತಿಳುವಳಿಕೆ ನಿಟ್ಟಿನಲ್ಲಿ ಕಾಫಿ ದಸರಾ ಒಂದು ಉತ್ತಮ ಪ್ರಯತ್ನವಾಗಿದ್ದು ಸಂಘದ ಸದಸ್ಯರೆಲ್ಲರೂ ಸಹಕಾರ ನೀಡುವುದಾಗಿ ಭರವಸೆ ನೀಡಿದರು.


ಕರ್ನಾಟಕ ಬೆಳೆಗಾರರ ಸಂಘದ ಅಧ್ಯಕ್ಷ ಕೆ.ರಾಜೀವ್ ಮಾತನಾಡಿ, ತಮ್ಮ ಸಂಘದಿಂದ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರಲ್ಲದೆ, ಕಾಫಿ ಜಿಲ್ಲೆಯಾದ ಕೊಡಗಿನ ದಸರಾ ಉತ್ಸವದಲ್ಲಿ ಕಾಫಿ ಕುರಿತು ಮಾಹಿತಿ ನೀಡುವ ಕಾರ್ಯಕ್ರಮ ಶ್ಲಾಘನೀಯ ಎಂದರು.


ಸಂಘದ ನಿರ್ದೇಶಕ ಕೆ.ಕೆ.ವಿಶ್ವನಾಥ್ ಮಾತನಾಡಿ, ಕಾಫಿ ದಸರಾದಲ್ಲಿ ಪಾಲ್ಗೊಂಡ ಕೃಷಿಕ ಸಮುದಾಯದವರು ವಿ?ಯ ತಜ್ಞರೊಂದಿಗೆ ಪ್ರಶ್ನೆಗಳನ್ನು ಕೇಳಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಕಾಫಿ ಮಂಡಳಿ ಅಧ್ಯಕ್ಷರಾಗಿ ನೇಮಕಗೊಂಡ ಬಳಿಕ ಇದೇ ಮೊದಲ ಬಾರಿಗೆ ದಿನೇಶ್ ಅವರೂ ಕಾಫಿ ದಸರಾದಲ್ಲಿ ಪಾಲ್ಗೊಳ್ಳುತ್ತಿರುವುದು ಕೂಡ ಕಾಫಿ ಕೃಷಿಕರಿಗೆ ಸಂತೋ?ದ ವಿಚಾರವಾಗಿದೆ ಎಂದು ಅಭಿಪ್ರಾಯಪಟ್ಟರು.
ಮಡಿಕೇರಿ ನಗರ ದಸರಾ ಸಮಿತಿಯ ಕಾರ್ಯಾಧ್ಯಕ್ಷ ಪ್ರಕಾಶ್ ಆಚಾರ್ಯ, ಪ್ರಧಾನ ಕಾರ್ಯದರ್ಶಿ ರಾಜೇಶ್ ಬಿ.ವೈ, ಖಜಾಂಜಿ ಅರುಣ್ ಶೆಟ್ಟಿ ಕಾಫಿ ದಸರಾಕ್ಕೆ ಸಮಿತಿಯಿಂದ ಸರ್ವ ರೀತಿಯ ಸಹಕಾರ ನೀಡುವುದಾಗಿ ಹೇಳಿದರು.


ಮಾಜಿ ಎಂಎಲ್‌ಸಿ ವೀಣಾಅಚ್ಚಯ್ಯ, ಕಾಫಿ ಮಂಡಳಿ, ತೋಟಗಾರಿಕೆ, ಚೆಸ್ಕಾಂ, ನಗರಸಭೆ, ಕೃಷಿ ಇಲಾಖೆ, ಕೈಗಾರಿಕಾ ಅಭಿವೃದ್ದಿ ಇಲಾಖೆ, ಸೇರಿದಂತೆ ವಿವಿಧ ಇಲಾಖಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.