ತಿರುಮಲನಗರ ಕ್ಯಾಂಪ್ ಸರ್ಕಾರಿ ಶಾಲೆಯಲ್ಲಿ ಮೂಲ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ಬಳ್ಳಾರಿ ಬಿಇಒ ಕಚೇರಿ ಮುಂದೆ ಎಐಡಿಎಸ್‌ಒ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧ್ಯಕ್ಷ ಕೆ.ಈರಣ್ಣ, ಪ್ರಮುಖರಾದ ಎಂ.ಶಾಂತಿ, ಉಮಾ, ಮಲ್ಲಿಕಾರ್ಜುನ, ಕಂಬಳಿ ಮಂಜುನಾಥ, ಗಿರಿಜಮ್ಮ, ಹೊನ್ನುರಮ್ಮ ಇದ್ದರು. 
ಜಿಲ್ಲೆ

ಸರ್ಕಾರಿ ಶಾಲೆಯಲ್ಲಿ ಮೂಲ ಸೌಕರ್ಯ ಒದಗಿಸಿ

ಗಾಯತ್ರಿ ಮಾಲಿಪಾಟೀಲ್

ಬಳ್ಳಾರಿ: ತಿರುಮಲ ನಗರ ಕ್ಯಾಂಪ್ ಸರ್ಕಾರಿ ಶಾಲೆಯಲ್ಲಿ ಮೂಲ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ನಗರದ ಬಿಇಒ ಕಚೇರಿ ಮುಂದೆ ಎಐಡಿಎಸ್‌ಒ ಸಂಘಟನೆಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾಧ್ಯಕ್ಷ ಕೆ.ಈರಣ್ಣ ಮಾತನಾಡಿ, ತಿರುಮಲ ನಗರ ಕ್ಯಾಂಪಿನ ಸರ್ಕಾರಿ ಶಾಲೆ ಮೂರು ಕೊಠಡಿಗಳನ್ನು ಹೊಂದಿದ್ದು, ಮಳೆ ಬಂದರೆ ಛಾವಣಿ ಕುಸಿದು ಬೀಳುವ ಸ್ಥಿತಿಯಲ್ಲಿದೆ. ಶೌಚಗೃಹ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಪ್ರತಿವರ್ಷ ವಿದ್ಯಾರ್ಥಿಗಳ ದಾಖಲಾತಿ ಕುಸಿಯುತ್ತಿದೆ. ಕಟ್ಟಡ ದುರಸ್ತಿ ಜತೆ ನೂತನ ಕೊಠಡಿಗಳನ್ನು ನಿರ್ಮಿಸಬೇಕು. ಶೌಚಗೃಹ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಕಾಂಪೌಂಡ್ ನಿರ್ಮಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಬೇಕು. ಸರ್ಕಾರಿ ತೆಲುಗು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಿಕ್ಷಣ ಆರಂಭಿಸಬೇಕು ಎಂದು ಆಗ್ರಹಿಸಿ ಮುಖ್ಯಮಂತ್ರಿಗೆ ಬರೆದ ಮನವಿಯನ್ನು ಬಿಇಒ ಸಿದ್ಧಲಿಂಗಮೂರ್ತಿಗೆ ಸಲ್ಲಿಸಲಾಯಿತು.