ಸಿರವಾರ: ಸಿರವಾರ ಮತ್ತು ಕವಿತಾಳದಲ್ಲಿನ ಸ್ಲಂ ನಿವಾಸಿಗಳಿಗೆ ವಿಶೇಷ ಯೋಜನೆಯಡಿ ವಸತಿ ಹಾಗೂ ಮೂಲ ಸೌಕರ್ಯ ಒದಗಿಸುವಂತೆ ಒತ್ತಾಯಿಸಿ ದಲಿತ ಸಮರ ಸೇನೆಯ ಪದಾಧಿಕಾರಿಗಳು ಬುಧವಾರ ಬಸವೇಶ್ವರ ವೃತ್ತದಿಂದ ತಹಸಿಲ್ ಕಚೇರಿವರೆಗೆ ಜಾಥಾ ನಡೆಸಿದರು.
ಇದನ್ನೂ ಓದಿ: ಮೂಲ ಸೌಲಭ್ಯ ಕಾಣದ ಬೇವೂರು ಮುರಾರ್ಜಿ
ಸ್ಲಂ ನಿವಾಸಿಗಳಿಗೆ ಅಗತ್ಯ ಮೂಲ ಸೌಕರ್ಯ ಒದಗಿಸುವಂತೆ ಕಳೆದ ಮೂರು ವಷರ್ಗಳಿಂದ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಜಿಲ್ಲಾಧಿಕಾರಿ ಈ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಬೇಕು. ವಿಮುಕ್ತ ದೇವದಾಸಿಯರು, ವಿಧವೆಯರು, ಅಂಗವಿಕಲರಿಗೆ ಅಗತ್ಯ ಸೌಲಭ್ಯ ನೀಡಲು ವಿಫಲರಾದ ಅಧಿಕಾರಿಗಳನ್ನು ಅಮಾನತು ಮಾಡಬೇಕೆಂದು ಒತ್ತಾಯಿಸಿದರು.
ಹೋರಾಟಕ್ಕೆ ಅಧಿಕಾರಿಗಳು ಸ್ಪಂದಿಸಿಲ್ಲ ಎಂದು ಪ್ರತಿಭಟನಾಕಾರರು ಸಂಚಾರ ತಡೆದು ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಸ್ಥಳಕ್ಕೆ ತಹಸೀಲ್ದಾರ್ ರವಿ ಎಸ್.ಅಂಗಡಿ ಆಗಮಿಸಿ ಸಮಸ್ಯೆ ಪರಿಹಾರಕ್ಕೆ ಕಾಲಾವಕಾಶ ಕೇಳಿದರು. ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು.