ಕೊಳ್ಳೇಗಾಲ ತಾಲೂಕು ಕುಂತೂರು ಬಣ್ಣಾರಿ ಅಮ್ಮನ ಸಕ್ಕರೆ ಕಾರ್ಖಾನೆಯಲ್ಲಿ ಆಯೋಜಿಸಿದ್ದ ಕಾರ್ಮಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಸುನಿತಾ ಮಾತನಾಡಿದರು., ಎಂ.ರಂಜಿತ್ ಕುಮಾರ್, ರವಿ, ಮಹೇಶ್, ಬಿ.ಎಲ್ ಪ್ರಸಾದ್ ಇತರರು ಇದ್ದರು.  
ಜಿಲ್ಲೆ

ಕಾರ್ಮಿಕರಿಗೆ ಸವಲತ್ತು ಒದಗಿಸಿಕೊಡಿ

ಶಿವಶಂಕರ್ ಎಂ. ಹೆಬ್ಬಳ್ಳ

ಕೊಳ್ಳೇಗಾಲ : ಕಾರ್ಮಿಕರು ಉತ್ತಮ ಜೀವನ ನಡೆಸಲು ಬೇಕಾಗುವ ಎಲ್ಲ್ಲ ಸವಲತ್ತುಗಳನ್ನು ಮಾಲೀಕ ವರ್ಗ ನೀಡಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷೆ ಸುನಿತಾ ತಿಳಿಸಿದರು.

ತಾಲೂಕು ಕುಂತೂರು ಬಣ್ಣಾರಿ ಅಮ್ಮನ ಸಕ್ಕರೆ ಕಾರ್ಖಾನೆಯಲ್ಲಿ ಸೋಮವಾರ ಕಾರ್ಮಿಕ ಇಲಾಖೆ, ತಾಲೂಕು ಕಾನೂನು ಸೇವಾ ಸಮಿತಿ ಕೊಳ್ಳೇಗಾಲ ಸಹಯೋಗದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಕಾರ್ಮಿಕ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮೇ 1 ಪ್ರತಿ ವರ್ಷ ಕಾರ್ಮಿಕ ದಿನಾಚರಣೆ ಆಚರಿಸಲಾಗುತ್ತಿದೆ. ಕಾರ್ಮಿಕರ ಹಿತಾಸಕ್ತಿಗಾಗಿ ಹಲವು ಕಾರ್ಮಿಕ ಕಾಯ್ದೆಗಳು ಜಾರಿಯಲ್ಲಿವೆ. ಅವುಗಳನ್ನು ಕಾರ್ಮಿಕರಿಗೆ ತಲುಪಿಸುವಂತೆ ಮಾಡುವಲ್ಲಿ ಮಾಲೀಕರ ವರ್ಗ ಮತ್ತು ಕಾರ್ಮಿಕ ಇಲಾಖೆ ಶ್ರಮಿಸುತ್ತಿದೆ ಎಂದು ತಿಳಿಸಿದರು.

ತಾಲೂಕು ವಕೀಲ ಸಂಘದ ಅಧ್ಯಕ್ಷ ರವಿ ಮಾತನಾಡಿ, ಕಾರ್ಮಿಕರು ದೇಶದ ಸಂಪತ್ತು, ದೇಶದ ಅಭಿವೃದ್ಧಿಯಲ್ಲಿ ಕಾರ್ಮಿಕರ ಪಾತ್ರ ಬಹಳ ಮುಖ್ಯವಾಗಿದೆ. ಕಾರ್ಮಿಕರು ಸಹ ಕಾರ್ಖಾನೆಗಳ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಮಹೇಶ್ ಮಾತನಾಡಿ, ಕಾರ್ಮಿಕರಲ್ಲಿ ಎರಡು ವರ್ಗಗಳಿದ್ದು ಅವುಗಳಲ್ಲಿ ಸಂಘಟಿತ ಕಾರ್ಮಿಕರು ಮತ್ತು ಅಸಂಘಟಿತ ಕಾರ್ಮಿ ಕರು ಎಂದು ವಿಂಗಡಿಸಲಾಗಿದೆ. ಅಸಂಘಟಿತ ಕಾರ್ಮಿಕರಿಗೆ ಯಾವುದೇ ರೀತಿಯ ಭದ್ರತೆ ಸೌಲ ಭ್ಯಗಳು ಅಷ್ಟಾಗಿ ಸಿಗುತ್ತಿಲ್ಲ. ಸಂಘಟಿತ ಕಾರ್ಮಿಕರುಗಳಿಗೆ ಕಾರ್ಖಾನೆ ಕಡೆಯಿಂದ ಕನಿಷ್ಠ ವೇತನ ಬೋನಸ್ ಹಾಗೂ ಇತರ ಸೌಲಭ್ಯಗಳನ್ನು ನೀಡುತ್ತಿದ್ದಾರೆ. ಹಾಗೆಯೇ ಕಾರ್ಮಿಕ ಇಲಾಖೆ ಸಹ ಕಾರ್ಮಿಕರ ಶ್ರೇಯೋಅಭಿವೃದ್ಧಿಗಾಗಿ ಕಾರ್ಯ ನಿರ್ವಹಿಸುತ್ತಿದೆ. ಕಾರ್ಮಿಕರು ಯಾವುದೇ ಸಮಸ್ಯೆಗಳಿದ್ದರೂ ಕಾರ್ಮಿಕ ಇಲಾಖೆಯನ್ನು ಸಂಪರ್ಕಿಸಿ ಮನವಿ ಸಲ್ಲಿಸಬಹುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಅಪರ ಸಿವಿಲ್ ನ್ಯಾಯಾಧೀಶ ಎಂ.ರಂಜಿತ್ ಕುಮಾರ್, ಕಾರ್ಮಿಕ ನಿರೀಕ್ಷಕ ಬಿ.ಎಲ್ ಪ್ರಸಾದ್, ವಕೀಲ ರೋಹಿತಾಶ್ವ, ಕಾರ್ಖಾನೆಯ ಮ್ಯಾನೇಜರ್ ಮುತ್ತುಕುಮಾರ್, ಸೋಮಶೇಖರ್ ಹಾಜರಿದ್ದರು.