ಜಿಲ್ಲೆ

ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ಬಸ್ ಸೌಕರ್ಯ ಕಲ್ಪಿಸಿ

ಕೃಷ್ಣ ಕುಲಕರ್ಣಿ

ಚಿಂಚೋಳಿ: ತಾಲೂಕಿನ ಸುಲೇಪೇಟ ಗ್ರಾಮದ ಬಸವೇಶ್ವರ ವೃತ್ತದ ಬಳಿ ಬಹುಜನ ವಿದ್ಯಾರ್ಥಿ ಫೇಡರೇಷನ್ ಹಾಗೂ ಬಹುಜನ ಮಹಿಳಾ ಸಂಘಟನೆ ವತಿಯಿಂದ ರಸ್ತಾ ರೋಕೋ ಚಳುವಳಿ ನಡೆಸಿ ಸಾರಿಗೆ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆ ಉದ್ದೇಶಿಸಿ ಭಾರತ ಮುಕ್ತಿ ಮೋರ್ಚಾ ರಾಜ್ಯ ಸಂಚಾಲಕ ಮಾರುತಿ ಗಂಜಗೇರಾ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಬಸ್ ಸೌಕರ್ಯ ಕಲ್ಪಿಸಲು ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಕಿಡಿಕಾರಿದರು.

ಕೂಡಲೇ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ತೆರಳಲು ಸಮಯಕ್ಕೆ ಸರಿಯಾಗಿ ಬಸ್ ಸೌಕರ್ಯ ಕಲ್ಪಿಸಬೇಕು ಎಂಬುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ವ್ಯವಸ್ಥಾಪಕ ಅಶೋಕ ಪಾಟೀಲ, ಶಿರಸ್ತೆದಾರ ಕೇಶವ ಕುಲಕರ್ಣಿ ಅವರಿಗೆ ಮನವಿ ಸಲ್ಲಿಸಿದರು.

ಈ ಹೋರಾಟದಲ್ಲಿ ಭಾರತ ಮುಕ್ತಿ ಮೋರ್ಚಾ ಸಂಘಟನೆ ಪದಾಧಿಕಾರಿಗಳು, ವಿವಿಧ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.