ವಿಜಯಪುರ:ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪ್ರಗತಿಯನ್ನು ಗುರಿಯಾಗಿಟ್ಟುಕೊಳ್ಳದೇ ಎಲ್ಲರೂ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕಾಗಿ ಸಮನ್ವಯದಿಂದ ಹಾಗೂ ಯೋಜನಾಬದ್ಧವಾಗಿ ಕಾರ್ಯ ನಿರ್ವಹಿಸಬೇಕು ಎಂದು ಜಿ.ಪಂ. ಸಿಇಒ ರಿಷಿ ಆನಂದ ಸೂಚನೆ ನೀಡಿದರು.
ನಗರದ ಜಿ.ಪಂ. ಸಭಾಭವನದಲ್ಲಿ ವಿವಿಧ ಇಲಾಖೆಯ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ವಿಡಿಯೋ ಸಂವಾದದ ಮೂಲಕ ಮಂಗಳವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದ ಅವರು, ಮನರೇಗಾ, ಸ್ವಚ್ಚ ಭಾರತ ಮಿಷನ್ ಮತ್ತು ವಸತಿ ಯೋಜನೆ ಸೇರಿದಂತೆ ಎಲ್ಲಾ ಯೋಜನೆಗಳಲ್ಲಿ ನಿಯಮಾನುಸಾರ ಪ್ರಗತಿ ಸಾಧಿಸಬೇಕು ಎಂದು ತಾಕೀತು ಮಾಡಿದರು.
ತಾ.ಪಂ. ಕಾರ್ಯ ನಿರ್ವಹಣಾಧಿಕಾರಿಗಳು ಹಾಗೂ ಸಂಬಂಧಿಸಿದ ವಿಭಾಗದ ಸಹಾಯಕ ನಿರ್ದೇಶಕರು ಸತತ ೇತ್ರ ಭೇಟಿ ನೀಡಿ, ಸಮರ್ಪಕ ಹಾಗೂ ನಿಗದಿತ ಕಾಲಾವಧಿಯಲ್ಲಿ ಯೋಜನೆಗಳು ಅನುಷ್ಠಾನಗೊಳ್ಳುವ ನಿಟ್ಟಿನಲ್ಲಿ ಪಿಡಿಒಗಳ ಸಭೆ ಕರೆದು, ಅಗತ್ಯ ಸಲಹೆ ಸೂಚನೆ ನೀಡಬೇಕು. ಜಿಲ್ಲಾದ್ಯಂತ ಮಳೆಯಾಗುತ್ತಿರುವುದರಿಂದ ಮಳೆ ನೀರು ಹಾಗೂ ಕಲುಷಿತ ನೀರು ಕುಡಿಯುವ ನೀರಿನೊಡನೆ ಸೇರದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚನೆ ನೀಡಿದರು.
ನೀರಿನ ಟ್ಯಾಂಕ್ಗಳನ್ನು ನಿಯಮಿತವಾಗಿ ಸ್ವಚ್ಚಗೊಳಿಸುವುದು ಮತ್ತು ಸ್ವಚ್ಛಗೊಳಿಸಿರುವ ಕುರಿತಾಗಿ ಲಾಗ್ ವಹಿಯನ್ನು ನಿರ್ವಹಣೆ ಮಾಡಬೇಕು. ಹದಿನೈದು ದಿನಗಳಿಗೊಮ್ಮೆ ಕುಡಿಯುವ ನೀರಿನ ಜಲಮೂಲಗಳ ಪರೀೆ ಮಾಡಬೇಕು. ಕುಡಿಯುವ ನೀರಿನ ಮೂಲಗಳಲ್ಲಿ ಸ್ವಚ್ಛತೆ ಕಾಪಾಡಬೇಕು.
ಗ್ರಾಮಗಳಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ಅಗತ್ಯ ಮುಂಜಾಗ್ರತಾ ಕ್ರಮ ವಹಿಸಬೇಕು. ಗ್ರಾಮದಲ್ಲಿ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಮನರೇಗಾ ಯೋಜನೆಯಡಿ ನೈಜ ಫಲಾನುಭವಿಗಳಿಗೆ ನಿರಂತರ ನೂರು ದಿನಗಳವರೆಗೆ ಕೆಲಸ ನೀಡಿ, ಕಾಯಕ ಸಂಗಳನ್ನು ಗುರುತಿಸಿ ಅವರಿಗೆ ಮನವೊಲಿಸಿ ಯೋಜನೆಯಡಿ ಭಾಗವಹಿಸುವಂತೆ ಪ್ರೇರಣೆ ನೀಡುವ ಕಾರ್ಯ ಮಾಡಲು ತಿಳಿಸಿದರು. ಕೆಲಸ ಕೇಳಿ ಬರುವ ಮತ್ತು ಸಮಸ್ಯೆ ಹೊತ್ತು ಬರುವ ಸಾರ್ವಜನಿಕರ ಸಮಸ್ಯೆ ಆಲಿಸಬೇಕು. ಅವರ ಸಮಸ್ಯೆಗಳು ನಿಮ್ಮ ಹಂತದಲ್ಲಿಯೇ ಅವುಗಳನ್ನು ಪರಿಹರಿಸಬೇಕು.
ಸಾಮಾಜಿಕ ಕಾಳಜಿ ಹೊಂದಿ ಕಾರ್ಯ ನಿರ್ವಹಿಸಿ, ಗುರಿ ನಿಗದಿಪಡಿಸಿಕೊಂಡು ಕೆಲಸ ಮಾಡುವ ಮೂಲಕ ಪ್ರಗತಿ ಸಾಧಿಸಿ ಎಂದು ಸಲಹೆ ನೀಡಿದರು.
ಜಿ.ಪಂ. ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ, ಮುಖ್ಯ ಲೆಕ್ಕಾಧಿಕಾರಿಗಳ ರಾಮಣ್ಣ ಅಥಣಿ, ಮುಖ್ಯ ಯೋಜನಾಧಿಕಾರಿ ಸಿ.ಬಿ. ಕುಂಬಾರ ಮತ್ತಿತರರಿದ್ದರು.
ವಿಜಯಪುರದ ಜಿ.ಪಂ. ಸಭಾಭವನದಲ್ಲಿ ವಿವಿಧ ಇಲಾಖೆಯ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿ.ಪಂ. ಸಿಇಒ ರಿಷಿ ಆನಂದ ಮಾತನಾಡಿದರು. ವಿಜಯಕುಮಾರ ಆಜೂರ, ರಾಮಣ್ಣ ಅಥಣಿ ಮತ್ತಿತರರಿದ್ದಾರೆ.