ಬೆಳಗಾವಿ ಜಿಪಂ ಸಿಇಒ ರಾಹುಲ್​ ಶಿಂಧೆ ಬೆಳಗಾವಿ ನಗರದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಜಂನಗರದ ಮೆಟ್ರಿಕ್​ ನಂತರದ ಬಾಲಕಿಯರ ವಸತಿ ನಿಲಯಯಕ್ಕೆ ಜಿಪಂ ಸಿಇಒ ರಾಹುಲ್​ ಶಿಂಧೆ ಭೇಟಿ ನೀಡಿ ಪರಿಶೀಲಿಸಿದರು. 
ಜಿಲ್ಲೆ

ವಸತಿ ವಿದ್ಯಾರ್ಥಿಗಳಿಗೆ ಸೌಲಭ್ಯ ಕಲ್ಪಿಸಿ: ರಾಹುಲ್​ ಶಿಂಧೆ

ವಿಠ್ಠಲ ಹಣಮಂತ ಬಾಳೇಕುಂದ್ರಿ

ಬೆಳಗಾವಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್​ ಶಿಂಧೆ ಬೆಳಗಾವಿ ನಗರದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಜಂನಗರದ ಮೆಟ್ರಿಕ್​ ನಂತರದ ಬಾಲಕಿಯರ ವಸತಿ ನಿಲಯ ಹಾಗೂ ಶಿವಬಸವ ನಗರದ ಮೆಟ್ರಿಕ್​ ಪೂರ್ವ ಬಾಲಕರ ವಸತಿ ನಿಲಯಕ್ಕೆ ದಿಢೀರ್​ ಭೇಟಿ ನೀಡಿ ಪರಿಶೀಲಿಸಿದರು.

ಅಡುಗೆ ಕೋಣೆ, ಶೌಚಗೃಹ ಸೇರಿ ಅಲ್ಲಿರುವ ವ್ಯವಸ್ಥೆ ಪರಿಶೀಲಿಸಿದರು. ಹಾಸ್ಟೆಲ್​ನಲ್ಲಿ ಲಭ್ಯವಾಗುತ್ತಿರುವ ಸೌಲಭ್ಯ, ಕುಡಿಯುವ ನೀರಿನ ಶುದ್ಧತೆ ಹಾಗೂ ಶುಚಿತ್ವದ ಕುರಿತಂತೆ ಮಾಹಿತಿ ಕಲೆ ಹಾಕಿದರು. ಗ್ರಂಥಾಲಯ ಚಿಕ್ಕದಾಗಿದ್ದು ಮಕ್ಕಳಿಗೆ ಓದುವುದಕ್ಕೆ ಅನಾನುಕೂಲ ಇದೆ. ಇದನ್ನು ವಿಸ್ತರಣೆ ಮಾಡಿ ಎಂದು ಅಧಿಕಾರಿಗಳಿಗೆ ತಿಳಿಸಿದರು. ಆಹಾರದ ಗುಣಮಟ್ಟ ಪರಿಶೀಲನೆ ನಡೆಸಿದರು. ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಲಭ್ಯವಾಗುವ ಸೌಲಭ್ಯಗಳನ್ನು ನಿಯಮಾನುಸಾರ ವಿತರಣೆ ಮಾಡಬೇಕು ಎಂದು ಸಿಬ್ಬಂದಿಗೆ ಸೂಚಿಸಿದರು.ಈ ವೇಳೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬಸವರಾಜ ಕುರಿಹುಲಿ, ವಸತಿ ನಿಲಯದ ಸಿಬ್ಬಂದಿ ಇದ್ದರು.