ರಾಯಚೂರು: ವಿದ್ಯಾರ್ಥಿ ವೇತನ ಬಿಡುಗಡೆ ಹಾಗೂ ಹಾಸ್ಟೆಲ್‌ಗಳಲ್ಲಿ ಅಗತ್ಯ ಸೌಲಭ್ಯ ಒದಗಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಎಬಿವಿಪಿ ಸಂಘಟನೆ ನೇತೃತ್ವದಲ್ಲಿ ಬುಧವಾರ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಇದನ್ನೂ ಓದಿ:ಭಕ್ತರಿಗೆ ಅಗತ್ಯ ಸೌಲಭ್ಯ ಒದಗಿಸಿ
ಹಾಸ್ಟೆಲ್‌ಗಳಿಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆ ಕೂಡಲೇ ಪೂರ್ಣಗೊಳಿಸಿ ಪ್ರವೇಶಾತಿ ನೀಡಬೇಕು. ವಿದ್ಯಾರ್ಥಿಗಳಿಗೆ ಸರ್ಕಾರದ ಕಿಟ್‌ಗಳನ್ನು ನೀಡಬೇಕು. ಪ್ರತಿ ವಿದ್ಯಾರ್ಥಿಗೆ ನೀಡುವ 1,850 ರೂ. ಊಟದ ಹಣ ಸಾಲುತ್ತಿಲ್ಲ. ಈ ಬಗ್ಗೆ ಪರಿಶೀಲಿಸಿ ಊಟದ ಹಣ ಹೆಚ್ಚಿಸಬೇಕು. ಸಮಾಜ ಕಲ್ಯಾಣ ಇಲಾಖೆಯ ಹಿಂದುಳಿದ ವರ್ಗ ಹಾಗೂ ಅಲ್ಪ ಸಂಖ್ಯಾತ ಇಲಾಖೆಯ ಹಾಸ್ಟೆಲ್‌ಗಳ ಸಂಖ್ಯೆ ಹೆಚ್ಚಳ ಮಾಡಬೇಕು. ಬಾಕಿ ವಿದ್ಯಾರ್ಥಿ ವೇತನವನ್ನು ತಕ್ಷಣವೇ ಖಾತೆಗೆ ಜಮೆ ಮಾಡಬೇಕು ಎಂದು ಒತ್ತಾಯಿಸಿ ಡಿಸಿ ಕಚೇರಿಯ ಗ್ರೇಡ್-2 ತಹಸೀಲ್ದಾರ್ ಪರಶುರಾಮಗೆ ಮನವಿ ಸಲ್ಲಿಸಿದರು.