ರಾಯಚೂರು: ನಗರದ ರಿಮ್ಸ್ ಆಸ್ಪತ್ರೆಯಲ್ಲಿ ಅಗತ್ಯ ಮೂಲ ಸೌಕರ್ಯಗಳಿಲ್ಲದೆ ರೋಗಿಗಳಿಗೆ ಸಮಸ್ಯೆಯುಂಟಾಗುತ್ತಿದ್ದು, ಆಸ್ಪತ್ರೆಯಲ್ಲಿ ಅಗತ್ಯ ಮೂಲ ಸೌಕರ್ಯ ಕಲ್ಪಿಸುವ ಮೂಲಕ ಅನುಕೂಲ ಕಲ್ಪಿಸಬೇಕು ಎಂದು ಜೈ ಕನ್ನಡ ರಕ್ಷಣಾ ವೇದಿಕೆ ಒತ್ತಾಯಿಸಿದೆ.
ವೇದಿಕೆ ನಿಯೋಗ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರಗೆ ಗುರುವಾರ ಮನವಿ ಸಲ್ಲಿಸಿ, ಲ್‌ಟಿ ದುರಸ್ತಿ, ವಾರ್ಡ್‌ಗಳಲ್ಲಿ ಅಟೆಂಡರ್‌ಗಳ ನೇಮಕ ಹಾಗೂ ಸ್ವಚ್ಛತೆ ನಿರ್ವಹಣೆಗೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಆಸ್ಪತ್ರೆಗೆ ಅಕ್ಕಪಕ್ಕದ ಜಿಲ್ಲೆ ಹಾಗೂ ಹೊರ ಜಿಲ್ಲೆಗಳ ರೋಗಿಗಳು ಚಿಕಿತ್ಸೆಗಾಗಿ ಬರುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಬಡ ರೋಗಿಗಳು ಬರುತ್ತಾರೆ. ಆದರೆ ಆಸ್ಪತ್ರೆಯಲ್ಲಿ ಅಗತ್ಯ ಮೂಲ ಸೌಕರ್ಯಗಳಿಲ್ಲದ ಕಾರಣ ರೋಗಿಗಳಿಗೆ ಸಮಸ್ಯೆಯುಂಟಾಗುತ್ತಿದೆ.
ಆಸ್ಪತ್ರೆಗಳಲ್ಲಿನ ವಿಭಾಗಗಳನ್ನು ಬೇರ್ಪಡಿಸಿ ಚಿಕಿತ್ಸೆಗೆ ಅನುಕೂಲ ಕಲ್ಪಿಸಬೇಕು. ಲ್‌ಟಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಮಾಡಬೇಕು. ಆಸ್ಪತ್ರೆ ಆವರಣದಲ್ಲಿ ವಾಹನಗಳ ಕಳ್ಳತನವಾಗುತ್ತಿದ್ದು, ಸಿಸಿ ಕ್ಯಾಮರಾ ಅಳವಡಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ನಿಯೋಗದಲ್ಲಿ ವೇದಿಕೆ ರಾಜ್ಯಾಧ್ಯಕ್ಷ ಎನ್.ಶರಣಪ್ಪ, ಜಿಲ್ಲಾಧ್ಯಕ್ಷ ಚಿನ್ನಯ್ಯಸ್ವಾಮಿ, ಉಪಾಧ್ಯಕ್ಷ ಬಿ.ಹನುಮಂತು, ಪದಾಕಾರಿಗಳಾದ ಸೈಯದ್ ಪಾಷಾ ಕುರ್ಡಿ, ಶರಣಕುಮಾರ ಇದ್ದರು.