ಸಿಂಧನೂರಿನ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಎಂಎಲ್ಸಿ ಬಸನಗೌಡ ಬಾದರ್ಲಿ ಭಾನುವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು. 
ಜಿಲ್ಲೆ

ವಿದ್ಯಾರ್ಥಿಗಳಿಗೆ ಗುಣಮಟ್ಟ ಆಹಾರ ನೀಡಿ

ನರೇಶ್ ಕುಮಾರ್

ಸಿಂಧನೂರು: ನಗರದ ಡಾ.ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಭಾನುವಾರ ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ವಿದ್ಯಾರ್ಥಿಗಳಿಂದ ಹಾಸ್ಟೆಲ್ ವ್ಯವಸ್ಥೆ, ಕುಂದು-ಕೊರತೆ, ಅಗತ್ಯ ಸೌಲಭ್ಯ ಸೇರಿ ಹಲವು ವಿಷಯಗಳ ಕುರಿತು ಮಾಹಿತಿ ಪಡೆದರು. ನಂತರ ಮಾತನಾಡಿದ ಬಸನಗೌಡ ಬಾದರ್ಲಿ ಅವರು, ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ನೀಡಬೇಕು.

ಸಿಬ್ಬಂದಿ ಕೆಲಸದ ಅವಧಿಯಲ್ಲಿ ಹೊರಹೋಗದೆ ಕಾರ್ಯನಿರ್ವಹಿಸಬೇಕು. ಶೌಚಗೃಹ ಮತ್ತು ಗ್ರಂಥಾಲಯ ದುರಸ್ತಿಗೊಳಿಸಬೇಕು. ವಿದ್ಯಾರ್ಥಿಗಳಿಗೆ ಯಾವುದೇ ಕೊರತೆ ಆಗದಂತೆ ಅಗತ್ಯ ಸೌಲಭ್ಯ ಕಲ್ಪಿಸಬೇಕೆಂದು ವಾರ್ಡನ್‌ಗೆ ಸೂಚಿಸಿದರು.