ಜಿಲ್ಲೆ

ಮರಾಠ ಸಮುದಾಯ ಭವನ ನಿರ್ಮಾಣಕ್ಕೆ ಜಾಗ ಒದಗಿಸಿ: ಎಸ್.ಎನ್.ರಾಜಾರಾವ್

ಮಡಿಕೇರಿ: ಕುಶಾಲನಗರದಲ್ಲಿ ಮರಾಠ ಸಮುದಾಯ ಭವನ ನಿರ್ಮಾಣಕ್ಕೆ ಕನಿಷ್ಠ ೨೫ ಸೆಂಟ್ ಜಾಗವನ್ನು ಒದಗಿಸುವಂತೆ ಮರಾಠ ಸಮಾಜದ ಜಿಲ್ಲಾ ಅಧ್ಯಕ್ಷ ಎಸ್.ಎನ್.ರಾಜಾರಾವ್‌ರವರು ಮನವಿ ಮಾಡಿದರು.


ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ವತಿಯಿಂದ ನಗರದ ಭಾರತೀಯ ವಿದ್ಯಾಭವನ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಛತ್ರಪತಿ ಶಿವಾಜಿ ಮಹಾರಾಜರ ಹಾಗೂ ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡುರವರು ಮಾತನಾಡಿದರು.


ಕುಶಾಲನಗರದಲ್ಲಿ ಮರಾಠ ಸಮಾಜ ಜನಸಂಖ್ಯೆ ಇದ್ದು, ಅಲ್ಲಿ ಮರಾಠ ಸಮುದಾಯ ಭವನ ನಿರ್ಮಾಣ ಮಾಡುವುದರಿಂದ ಸ್ಥಳೀಯರಿಗೆ ಅನುಕೂಲವಾಗಲಿದೆ. ಮರಾಠ ಸಮುದಾಯ ಭವನ ನಿರ್ಮಾಣಕ್ಕೆ ರಾಜ್ಯ ಮರಾಠ ಪರಿಷತ್ತಿನಿಂದಲೂ ಅನುದಾನ ದೊರೆಯಲಿದೆ. ಹಾಗೆಯೇ ಸ್ಥಳೀಯ ಅಭಿವೃದ್ಧಿ ಯೋಜನೆಯಡಿ ಅನುದಾನ ಲಭ್ಯ ಆಗಲಿದ್ದು, ಜಾಗ ನೀಡುವಂತೆ ಕೋರಿದರು.


ಕರ್ನಾಟಕ ಜೀವ ವೈವಿದ್ಯ ಮಂಡಳಿ ರಾಜ್ಯ ಅದ್ಯಕ್ಷ ನಾಪಂಡ ರವಿಕಾಳಪ್ಪ ಮಾತನಾಡಿ, ಶಿವಾಜಿ ಮಹಾರಾಜರು ಭಾರತೀಯ ಸಂಸ್ಕೃತಿ ಮತ್ತು ಜೀವನ ಪದ್ಧತಿ ಸಂರಕ್ಷಣೆಗೆ ಮತ್ತು ಅಭಿವೃದ್ಧಿಗೆ ಒತ್ತು ನೀಡಿದ್ದರು. ಸಂತ ಸೇವಾಲಾಲ್‌ರವರ ಆದರ್ಶಗಳನ್ನು ತಿಳಿದುಕೊಳ್ಳುವಂತಾಗಬೇಕು. ಪ್ರಕೃತಿಯನ್ನು ಪೂಜಿಸುವ ಶ್ರಮಿಕ ವರ್ಗವಾಗಿದ್ದು, ಯಾವುದೇ ಪ್ರದೇಶಕ್ಕೆ ಹೋದರೂ ಒಂದೇ ಭಾಷೆ ಮಾತನಾಡುತ್ತಾರೆ ಎಂದು ತಿಳಿಸಿದರು.


ಹೆಬ್ಬಾಲೆ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ವೆಂಕಟ ನಾಯಕ್ ಮಾತನಾಡಿ, ಶಿವಾಜಿ ಮಹಾರಾಜರು ಭಾರತ ದೇಶವನ್ನು ಸ್ವರಾಜ್ಯ ಸಾಮ್ರಾಜ್ಯವನ್ನಾಗಿ ಮಾಡಬೇಕು ಎಂಬ ಕನಸು ಕಂಡಿದ್ದವರು. ಭಾರತೀಯ ಸಂಸ್ಕೃತಿ ಮತ್ತು ಧಾರ್ಮಿಕ ಕೇಂದ್ರಗಳ ರಕ್ಷಣೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು.


ಭಾರತದ ಸಾಂಸ್ಕೃತಿಕ ಚರಿತ್ರೆ ಅರ್ಥ ಮಾಡಿಕೊಳ್ಳಬೇಕಾದರೆ ಶಿವಾಜಿಯವರ ಚರಿತ್ರೆ ತುಂಬಾ ವಿಶೇ?. ಛತ್ರಪತಿ ಶಿವಾಜಿ ಮಹಾರಾಜರವರ ಜಯಂತಿ ಆಚರಿಸುವ ಮೂಲಕ ಅದರ ಜತೆಜತೆಗೆರವರ ಜೀವನ ಸಾಧನೆಯನ್ನು ಜನರಿಗೆ ತಿಳಿಸುವಂತಹ ಪ್ರಯತ್ನ ಮಾಡುವಂತಾಗಬೇಕು ಎಂದರು.


ಸಂತ ಸೇವಾಲಾಲ್‌ರವರು ದಾವಣಗೆರೆ ಜಿಲ್ಲೆಯಲ್ಲಿ ಹುಟ್ಟಿ ಬೆಳೆದರು ಸಮಾಜದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ರಾಷ್ಟ್ರದ ಎಲ್ಲೆಡೆ ಸಂತ ಸೇವಾಲಾಲ್ ಜನಾಂಗದವರು ಇದ್ದು, ಲಂಬಾಣಿ, ಬಂಜಾರ ಜನಾಂಗದವರ ಉಡುಗೆ ತೊಡುಗೆ, ಸಂಸ್ಕೃತಿ ವಿಭಿನ್ನವಾಗಿದೆ ಎಂದರು.


ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಮಾತನಾಡಿ, ಶಿವಾಜಿ ಮಹಾರಾಜರು ತಮ್ಮ ಆಡಳಿತ ಅವಧಿಯಲ್ಲಿ ಹಲವು ಸುಧಾರಣೆಗಳನ್ನು ಜನಪರವಾಗಿ ಕೈಗೊಂಡು ಜನಮೆಚ್ಚುಗೆಗೆ ಪಾತ್ರರಾಗಿದ್ದರು. ಸಂತ ಸೇವಾಲಾಲರು ಹಲವು ಸಮಾಜಮುಖಿ ಕಾರ್ಯಗಳನ್ನು ಕೈಗೊಂಡು ಸಮಾಜದಲ್ಲಿ ಇತರರಂತೆ ಬದುಕು ಕಟ್ಟಿಕೊಳ್ಳುವಂತಾಗಲು ಜಾಗೃತಿ ಮೂಡಿಸಿದರು ಎಂದರು.


ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ, ಬಿ.ಸಿ.ಶಂಕರಯ್ಯ, ಚೊಕ್ಕಾಡಿ ಪ್ರೇಮ ರಾಘವಯ್ಯ ಇತರರು ಇದ್ದರು.