ಬಸವಾಪಟ್ಟಣ: ಸಮೀಪದ ಕತ್ತಲೆಗೆರೆ ಬಾಲಕಿಯರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಇರುವ ಕೊಳವೆ ಬಾವಿಗೆ ಮೋಟರ್ ಅಳವಡಿಸಿ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಶಾಲಾ ಅಭಿವೃದ್ಧಿ, ಮೇಲುಸ್ತುವಾರಿ ಸಮಿತಿ ಶನಿವಾರ ಗ್ರಾಪಂ ಅಭಿವೃದ್ಧಿ ಅಧಿಕಾರಿ ಹಾಗೂ ಅಧ್ಯಕ್ಷರಿಗೆ ಮನವಿಯನ್ನು ಸಲ್ಲಿಸಿತು.
ಮನವಿ ಸ್ವೀಕರಿಸಿದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೆ. ಸೌಮ್ಯ ಮಠದ್ ಮಾತನಾಡಿ, 15 ದಿನದೊಳಗೆ ಮೋಟಾರ್ ಅಳವಡಿಸಿ ನೀರಿನ ಸೌಲಭ್ಯ ಕಲ್ಪಿಸಿ ಕೊಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷ ಮಂಜಪ್ಪ, ಎಸ್‌ಡಿಎಂಸಿ ಅಧ್ಯಕ್ಷ ವಿಶ್ವನಾಥ್, ಉಪಾಧ್ಯಕ್ಷ ಆರ್. ಬಸವರಾಜ್, ಸದಸ್ಯರಾದ ಪ್ರವೀಣ್ ಕುಮಾರ್, ಆಂಜನೇಯ ಪಿ.ಮತ್ತಿತರರಿದ್ದರು.