ಜಿಲ್ಲೆ

ದೇವಾಲಯಗಳಿಂದ ದೇವರ ಸಾಮೀಪ್ಯ: ಪೇಜಾವರ ಶ್ರೀ ಆಶೀರ್ವಚನ

Avinash R

ವಿಜಯವಾಣಿ ಸುದ್ದಿಜಾಲ ಮೂಡುಬಿದಿರೆ

ದೇವರು ಸರ್ವವ್ಯಾಪಿಯಾಗಿದ್ದರೂ ಅವರನ್ನು ಕಾಣಲು ಸಾಧ್ಯವಿಲ್ಲ. ದೇವಾಲಯಗಳ ಮೂಲಕ ದೇವರ ಸಾಮೀಪ್ಯ ಸಿಗುತ್ತದೆ ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.

ಶ್ರೀ ಕ್ಷೇತ್ರ ಪುತ್ತಿಗೆ ಮಹತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನ ಪುನಃಪ್ರತಿಷ್ಠಾಪನೆ, ಅಷ್ಟಬಂಧ ಬ್ರಹ್ಮಕಲಶೋತ್ಸವ ಪ್ರಯುಕ್ತ ಗುರುವಾರ ರಾತ್ರಿ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು.

ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ, ಕಳೆದ ಮೂರು ವರ್ಷಗಳಲ್ಲಿ 18 ಮಾಗಣೆ 77 ಗ್ರಾಮಗಳಿಂದ ಒಂದು ಲಕ್ಷದಷ್ಟು ಕರಸೇವಕರು ತನು ಸೇವೆ ಅರ್ಪಿಸಿದ್ದಾರೆ ಎಂದರು.

ವಾಸ್ತುತಜ್ಞ ಅವಧಾನಿ ಗುಂಡಿಬೈಲು ಸುಬ್ರಹ್ಮಣ್ಯ ಭಟ್ ಧಾರ್ಮಿಕ ಉಪನ್ಯಾಸ ನೀಡಿದರು. ದೇವಳ ಬಳಿ ಇರುವ 60 ಸೆಂಟ್ಸ್ ಜಾಗವನ್ನು ಮಡ್ಮಣ್ಣಾಯ ಟ್ರಸ್ಟ್ ವತಿಯಿಂದ ಭೂದಾನ ಮಾಡಲಾಗಿದ್ದು, ಅದರ ಪತ್ರವನ್ನು ಉದ್ಯಮಿ ರಾಮದಾಸ್ ಮಡ್ಮಣ್ಣಾಯ ಕುಂಗೂರು ಅವರು ದೇವಳ ಆನುವಂಶಿಕ ಮೊಕ್ತೇಸರ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕುಲದೀಪ ಎಂ. ಅವರಿಗೆ ಹಸ್ತಾಂತರಿಸಿದರು. ಜೀರ್ಣೋದ್ಧಾರದ ದಾನಿಗಳನ್ನು ಗೌರವಿಸಲಾಯಿತು.

ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಡಾ.ಎಂ.ಮೋಹನ ಆಳ್ವ, ಧರ್ಮಸ್ಥಳದ ಡಿ.ಸುರೇಂದ್ರ ಕುಮಾರ್, ಅದಾನಿ ಗ್ರೂಪ್ಸ್‌ನ ಕಿಶೋರ್ ಆಳ್ವ, ಪಾಂಡುರಂಗ ಕಾಮತ್, ಪ್ರಶಾಂತ ವಾಟಿಕ, ಉದ್ಯಮಿಗಳಾದ ಶಶಿಧರ್ ಶೆಟ್ಟಿ ಬರೋಡಾ, ಕೆ.ಶ್ರೀಪತಿ ಭಟ್, ಸುಧಾಕರ ಶೆಟ್ಟಿ, ನ್ಯಾಶನಲ್ ಇನ್ವೆಸ್ಟಿಗೇಶನ್ ಏಜೆನ್ಸಿಯ ಕಾನೂನು ಸಲಹೆಗಾರ ಪ್ರಕಾಶ್ ಶೆಟ್ಟಿ, ದಯಾನಂದ ಶೆಟ್ಟಿ ಕಟ್ಟಣಿಗೆ, ಶಾರದಾ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎಂ.ಬಿ.ಪುರಾಣಿಕ್, ಕಸಾಪ ದ.ಕ. ಮಾಜಿ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಉಪಸ್ಥಿತರಿದ್ದರು. ಆಳ್ವಾಸ್ ಉಪನ್ಯಾಸಕ ವೇಣುಗೋಪಾಲ ಶೆಟ್ಟಿ ನಿರೂಪಿಸಿದರು.

ಕಾಲ ಕಾಲಕ್ಕೆ ಜೀರ್ಣೋದ್ಧಾರಗೊಂಡು ಆಸ್ತಿಕರ ಭಕ್ತಿ ಭಾವದ ತಾಣವಾಗಿ ದೇವಾಲಯಗಳು ಕಾಣಸಿಗುತ್ತವೆ. ಪುತ್ತಿಗೆ ಕ್ಷೇತ್ರ ಎಲ್ಲರ ಸಹಕಾರದೊಂದಿಗೆ ಅಭೂತಪೂರ್ವವಾಗಿ ನಿರ್ಮಾಣಗೊಂಡಿದೆ. ಎಲ್ಲೂ ಕಾಣಸಿಗದ ವಿಶಾಲವಾದ ಅಂಗಣವಿರುವ ಪುತ್ತಿಗೆ ಕ್ಷೇತ್ರ ವಿಶಿಷ್ಟ ರೀತಿಯಲ್ಲಿ ಮರುನಿರ್ಮಾಣಗೊಂಡು ಕಂಗೊಳಿಸುತ್ತಿದೆ. ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ, ಉಡುಪಿ ಪೇಜಾವರ ಮಠ ತುಳುನಾಡಿನ ವಿವಿಧ ಕಡೆ ಉತ್ತಮ ರೀತಿಯಲ್ಲಿ ಕ್ಷೇತ್ರಗಳ ಅಭಿವೃದ್ಧಿಯಾಗುತ್ತಿದೆ. ಭಕ್ತರು ಅಂತರಂಗ ಹಾಗೂ ಬಹಿರಂಗ ಶುದ್ಧಿಯೊಂದಿಗೆ ದೇವಾಲಯಗಳಲ್ಲಿ ಪ್ರಾರ್ಥಿಸಬೇಕು. ಸಂಕಲ್ಪದಿಂದ ಸಾಧನೆ ಸಾಧ್ಯ. ದೇವಾಲಯಕ್ಕೆ ಭೂದಾನ ಮಾಡುವ ಮೂಲಕ ಶಾಶ್ವತ ಸೇವೆ ವಾಡುತ್ತಿರುವುದು ಶ್ಲಾಘನೀಯ. ಡಾ.ಡಿ.ವೀರೇಂದ್ರ ಹೆಗ್ಗಡೆ, ಧರ್ಮಸ್ಥಳಧರ್ಮಾಧಿಕಾರಿ