ಬೆಂಗಳೂರು: ಪಿಎಸ್ಐ ಹುದ್ದೆಗಳ ನೇಮಕಾತಿಗೆ ಮಾ.8ರಂದು ಲಿಖಿತ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಪಟ್ಟಿ ಕಳುಹಿಸುವಂತೆ ಎಲ್ಲ ವಲಯದ ಐಜಿಪಿಗಳಿಗೆ ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಅಮ್ರಿತ್ ಪಾಲ್ ಆದೇಶ ಹೊರಡಿಸಿದ್ದಾರೆ.
ಮಾ.8ರ ಬೆಳಗ್ಗೆ 10ರಿಂದ 11.30ರವರೆಗೆ, ಮಧ್ಯಾಹ್ನ 1ರಿಂದ 2.30ರವರೆಗೆ ಪರೀಕ್ಷೆ ನಡೆಯಲಿದ್ದು, 54 ಸಾವಿರ ಮಂದಿ ಪರೀಕ್ಷೆ ಬರೆಯಲಿದ್ದಾರೆ. 1 ಕೊಠಡಿಯಲ್ಲಿ 20 ಅಭ್ಯರ್ಥಿಗಳಿಗೆ ಸ್ಥಳಾವಕಾಶ ಕಲ್ಪಿಸಬೇಕು. ಪರೀಕ್ಷಾ ಕೇಂದ್ರಗಳ ಪಟ್ಟಿ ತಯಾರಿಸಿ ಫೆ.18ರೊಳಗೆ ನೇಮಕಾತಿ ವಿಭಾಗಕ್ಕೆ ಕಳುಹಿಸಬೇಕು ಎಂದು ಸೂಚಿಸಿದ್ದಾರೆ.