ಆಳ್ವಾಸ್ ಕಾಲೇಜಿನಲ್ಲಿ ನಡೆದ ಮನೋವಿಜ್ಞಾನ ಉಪನ್ಯಾಸ ಕಾರ್ಯಕ್ರಮವನ್ನು ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ ಉದ್ಘಾಟಿಸಿದರು. ಬೆಂಗಳೂರಿನ ಮನೋಶಾಸಜ್ಞ ನವೀನ್ ಎಲ್ಲಂಗಳ, ಪತ್ರಿಕೋದ್ಯಮ ವಿಭಾಗದ ಸಂಯೋಜಕ ಪ್ರಸಾದ್ ಶೆಟ್ಟಿ ಮತ್ತಿತರರಿದ್ದರು. 
ಜಿಲ್ಲೆ

ಶಾಂತಿಯಿಂದ ಮಾನಸಿಕ ಸಮಸ್ಯೆ ದೂರ

ಮೂಡುಬಿದಿರೆ: ಸ್ವಯಂ ಜಾಗೃತಿ ಹಾಗೂ ವಿಶ್ಲೇಷಣೆಯಿಂದ ತನ್ನನ್ನು ತಾನು ಅರಿತುಕೊಳ್ಳಲು ಸಾಧ್ಯ. ನಾವು ನಿರಂತರವಾಗಿ ಶಾಂತ ಮನಸ್ಸನ್ನೇ ನಿಗ್ರಹಿಸಿಕೊಂಡರೆ, ಮಾನಸಿಕ ಸಮಸ್ಯೆ ಉಲ್ಬಣಿಸಲು ಅವಕಾಶವಿಲ್ಲ ಎಂದು ಬೆಂಗಳೂರಿನ ಮನೋಶಾಸಜ್ಞ ನವೀನ್ ಎಲ್ಲಂಗಳ ಹೇಳಿದರು.

ಮೂಡುಬಿದಿರೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಮೂಡುಬಿದಿರೆ ಪ್ರೆಸ್ ಕ್ಲಬ್ ಸಹಯೋಗದಲ್ಲಿ ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದಲ್ಲಿ ಗುರುವಾರ ಹಮ್ಮಿಕೊಂಡ ದೈನಂದಿನ ಜೀವನದಲ್ಲಿ ಮನೋವಿಜ್ಞಾನ ವಿಶೇಷ ಉಪನ್ಯಾಸ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಆಳ್ವಾಸ್ ಕಾಲೇಜಿನ ಆಡಳಿತ ಅಧಿಕಾರಿ ಬಾಲಕೃಷ್ಣ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಜನರ ಮನೋಭಾವ, ಅಭಿರುಚಿಯನ್ನು ಪತ್ರಕರ್ತರು ಬದಲಾವಣೆ ಮಾಡಲು ಸಾಧ್ಯ. ಸತ್ಯವನ್ನು ಅಳುಕಿಲ್ಲದೆ ತಿಳಿಸುವಲ್ಲಿ ಪತ್ರಕರ್ತರು ಮಹತ್ವದ ಪಾತ್ರ ನಿರ್ವಹಿಸಬೇಕು ಎಂದರು.


ಮೂಡುಬಿದಿರೆ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಯಶೋಧರ ವಿ. ಬಂಗೇರ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತ ಹರೀಶ್ ಕೆ. ಅದೂರು ಸ್ವಾಗತಿಸಿ, ಪತ್ರಿಕೋದ್ಯಮ ವಿಭಾಗದ ಸಂಯೋಜಕ ಪ್ರಸಾದ್ ಶೆಟ್ಟಿ ವಂದಿಸಿದರು. ವಿದ್ಯಾರ್ಥಿ ಪ್ರಖ್ಯಾತ್ ಬೆಳುವಾಯಿ ಕಾರ್ಯಕ್ರಮ ನಿರೂಪಿಸಿದರು. ಮೂಡುಬಿದಿರೆಯ ಪತ್ರಕರ್ತರು, ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.