ಜಿಲ್ಲೆ

ಪಂ. ಬಸವರಾಜ ರಾಜಗುರು ಪ್ರಶಸ್ತಿ ಪ್ರದಾನ

ಮಂಜುನಾಥ ಅಂಗಡಿ

ಧಾರವಾಡ: ಸ್ವರಸಾಮ್ರಾಟ ಪಂ. ಬಸವರಾಜ ರಾಜಗುರು ರಾಷ್ಟಿçÃಯ ಸ್ಮಾರಕ ಟ್ರಸ್ಟ್ ವತಿಯಿಂದ ಪದ್ಮಭೂಷಣ ಪಂ. ಬಸವರಾಜ ರಾಜಗುರು ಅವರ ೧೦೩ನೇ ಜನ್ಮದಿನಾಚರಣೆ ಅಂಗವಾಗಿ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ರಾಷ್ಟಿçÃಯ ಪ್ರಶಸ್ತಿ ಪ್ರದಾನ ಮತ್ತು ಸಂಗೀತೋತ್ಸವ ಕಾರ್ಯಕ್ರಮ ಗುರುವಾರ ಜರುಗಿತು.
೨೦೨೩ನೇ ಸಾಲಿನ ಸ್ವರಸಾಮ್ರಾಟ ಪಂ. ಬಸವರಾಜ ರಾಜಗುರು ರಾಷ್ಟಿçÃಯ ಪ್ರಶಸ್ತಿಯನ್ನು ಮುಂಬೈನ ವಿದುಷಿ ಅಶ್ವಿನಿ ಭಿಡೆ, ದೇಶಪಾಂಡೆ ಅವರಿಗೆ ಪ್ರದಾನ ಮಾಡಲಾಯಿತು. ಪ್ರಶಸ್ತಿಯು ೧ ಲಕ್ಷ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ. ರಾಷ್ಟಿçÃಯ ಯುವ ಪ್ರಶಸ್ತಿಯನ್ನು ಧಾರವಾಡದ ಡಾ. ಉದಯ ಕುಲಕರ್ಣಿ ಹಾಗೂ ಬೆಂಗಳೂರಿನ ಇಮಾನ ದಾಸ್ ಅವರಿಗೆ ಟ್ರಸ್ಟ್ ಅಧ್ಯಕ್ಷ ಚಂದ್ರಕಾAತ ಬೆಲ್ಲದ ಪ್ರದಾನ ಮಾಡಿದರು. ಇದು ತಲಾ ೨೫,೦೦೦ ರೂ. ನಗದು ಒಳಗೊಂಡಿದೆ.
ಕಾರ್ಯಕ್ರಮ ಉದ್ಘಾಟಿಸಿದ ಬೆಳಗಾವಿಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಬಸವರಾಜ ಹೂಗಾರ ಮಾತನಾಡಿ, ಸಂಗೀತ ಕ್ಷೇತ್ರದಲ್ಲಿ ಗುರು- ಶಿಷ್ಯರ ಪರಂಪರೆಗೆ ಬುನಾದಿ ಹಾಕಿದವರು ಸ್ವರಸಾಮÁ್ರಟ ಪಂ. ಬಸವರಾಜ ರಾಜಗುರು. ಸಂಗೀತ ಕ್ಷೇತ್ರಕ್ಕೆ ಧಾರವಾಡದ ಕೊಡುಗೆ ಅಪಾರ ಎಂದರು.
ಭಾರತಿದೇವಿ ರಾಜಗುರು, ನಿಜಗುಣ ರಾಜಗುರು, ಡಾ. ಮುದ್ದುಮೋಹನ, ಡಾ. ಉದಯಕುಮÁರ ದೇಸಾಯಿ, ಸಂಗೀತಾ ಕಟ್ಟಿ, ಇತರರಿದ್ದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮÁರ ಬೆಕ್ಕೇರಿ ಸ್ವಾಗತಿಸಿದರು.