ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ 40 ವರ್ಷಗಳ ಅವಧಿಯಲ್ಲಿ ನಾನು ಶಾಸಕನಾಗಿ, ಬಳಿಕ ಮಂತ್ರಿಯಾಗಿ ಅರ್ಹ ಫಲಾನುಭವಿಗಳಿಗೆ ಒಟ್ಟು 22 ಸಾವಿರಕ್ಕೂ ಮಿಕ್ಕಿ ಹಕ್ಕುಪತ್ರ ವಿತರಿಸಲಾಗಿದ್ದು, ಬಿಜೆಪಿ ಆಡಳಿತಾವಧಿಯಲ್ಲಿ ಇಂತಹ ಹೇಳಿಕೊಳ್ಳುವ ಸಾಧನೆಯೇ ಇಲ್ಲ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.
ರಾಯಿ ಪೇಟೆಯಲ್ಲಿ ಬ್ಲಾಕ್ ಕಾಂಗ್ರೆಸ್ ಮತ್ತು ವಲಯ ಕಾಂಗ್ರೆಸ್ ಸಮಿತಿ ವತಿಯಿಂದ ಗುರುವಾರ ಜನಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಾಲಕೃಷ್ಣ ಅಂಚನ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ಪೂಜಾರಿ, ಬುಡಾ ಅಧ್ಯಕ್ಷ ಬೇಬಿ ಕುಂದರ್ ಮಾತನಾಡಿದರು.
ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪ್ರಜ್ವಲ್ ಶೆಟ್ಟಿ, ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ವಿಲ್ಮಾ ಮೊರಾಸ್, ಗ್ರಾಪಂ ಸದಸ್ಯೆ ಶೋಭಾ ನೋಣಯ ಸಪಲ್ಯ, ಕಾಂಗ್ರೆಸ್ ವಲಯಾಧ್ಯಕ್ಷ ಮೋಹನ ಪೂಜಾರಿ, ಪ್ರಮುಖರಾದ ಕೆ.ಪಿ.ಲೋಬೊ, ನಾರಾಯಣ ಗೌಡ ಮಿಯಾಲು, ಕೆ.ರಮೇಶ ನಾಯಕ್ ರಾಯಿ, ಸುಧೀರ್ ಕುಮಾರ್ ಶೆಟ್ಟಿ, ರಾಘವೇಂದ್ರ ಪೂಜಾರಿ, ಅನಿಲ್ ಕುಮಾರ್, ಚಂದ್ರಶೇಖರ ಆಚಾರ್ಯ, ರಾಮಚಂದ್ರ ಶೆಟ್ಟಿಗಾರ್, ಅನಿಲ್ ರೋಶನ್ ಡಿಸೋಜ ಮತ್ತಿತರರಿದ್ದರು. ಬ್ಲಾಕ್ ಉಪಾಧ್ಯಕ್ಷ ಜಗದೀಶ್ ಕೊಯಿಲ ಸ್ವಾಗತಿಸಿದರು. ಎಪಿಎಂಸಿ ಮಾಜಿ ಸದಸ್ಯ ರಾಮಸುಂದರ ಗೌಡ ವಂದಿಸಿದರು.