ಉಡುಪಿ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ, ಗಾಂಧಿ ಸ್ಮೃತಿ, ಬೃಹತ್ ಜನಜಾಗೃತಿ ಜಾಥಾ ಮತ್ತು ಸಮಾವೇಶ ಅ.2 ರಂದು ಬೆಳಗ್ಗೆ 11 ಗಂಟೆಗೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿದೆ ಎಂದು ವೇದಿಕೆ ಜಿಲ್ಲಾಧ್ಯಕ್ಷ ನವೀನ್ಚಂದ್ರ ಶೆಟ್ಟಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತಿರ್ಥ ಸ್ವಾಮೀಜಿ ಉದ್ಘಾಟಿಸಲಿದ್ದಾರೆ. ಕಿರಿಯ ಶ್ರೀ ಸುಶೀಂದ್ರ ತೀರ್ಥ ಸ್ವಾಮೀಜಿ ಅಶೀರ್ವಚನ ನೀಡಲಿದ್ದಾರೆ. ಧರ್ಮಸ್ಥಳ ಧಮಾರ್ಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆಯನ್ನು ವಹಿಸುವರು. ಧಾರ್ಮಿಕ ಚಿಂತಕ ದಾಮೋದರ್ ಶರ್ಮ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಎಸ್.ಕೆ.ಡಿ.ಆರ್.ಪಿ ಬಿ.ಸಿ ಟ್ರಸ್ಟ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್., ಜನಜಾಗೃತಿ ವೇದಿಕೆ ಸ್ಥಾಪಕಾಧ್ಯಕ್ಷ ಅಪ್ಪಣ್ಣ ಹೆಗ್ಡೆ, ಟ್ರಸ್ಟಿ ಡಾ.ಪಿ.ವಿ. ಭಂಡಾರಿ ಮೊದಲಾದವರು ಉಪಸ್ಥಿತರಿರುವರು ಎಂದರು.
ಕಾರ್ಯಕ್ರಮಕ್ಕೂ ಮುನ್ನ ಉಡುಪಿಯ ಜೋಡುಕಟ್ಟೆಯಿಂದ ರಾಜಾಂಗಣದವರೆಗೆ ಜನಜಾಗೃತಿ ಜಾಥಾ ನಡೆಯಲಿದ್ದು, 30 ಭಜನಾ ಮಂಡಳಿ ತಂಡಗಳು, 20ಕ್ಕೂ ಅಧಿಕ ಟ್ಯಾಬ್ಲೋಗಳು, 8 ಸಾವಿರಕ್ಕೂ ಅಧಿಕ ಮಂದಿ ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ವೇದಿಕೆಯ ಜಿಲ್ಲಾ ನಿರ್ದೇಶಕ ನಾಗರಾಜ್ ಶೆಟ್ಟಿ, ಮಾಜಿ ಅಧ್ಯಕ್ಷ ನವೀನ್ ಅಮಿನ್, ಜನಜಾಗೃತಿ ವೇದಿಕೆ ತಾಲೂಕು ಅಧ್ಯಕ್ಷ ಸತ್ಯಾನಂದ ನಾಯಕ್, ಪ್ರಾದೇಶಿಕ ನಿರ್ದೇಶಕ ದುಗ್ಗೆಗೌಡ, ಜಿಲ್ಲಾ ಸಮಿತಿ ಸದಸ್ಯ ಶಿವಕುಮಾರ್ ಅಂಬಲಪಾಡಿ, ಯೋಜನಾಧಿಕಾರಿ ರಾಮ ಎಂ. ಮೊದಲಾದವರು ಉಪಸ್ಥಿತರಿದ್ದರು.