ಕೆರೂರ ಬಸ್ ನಿಲ್ದಾಣದಲ್ಲಿ ಅಪರಾಧ ತಡೆ ಕುರಿತು ಸಾರ್ವಜನಿಕರಿಗೆ ಸಿಪಿಐ ಕರಿಯಪ್ಪ ಬನ್ನೆ ಜಾಗೃತಿ ಮೂಡಿಸಿದರು. ಸಾರಿಗೆ ಇಲಾಖೆ ಇನ್ಸ್‌ಪೆಕ್ಟರ್ ವಿ. ಡಿ. ಹಿರೇಮಠ, ಅಪರಾಧ ವಿಭಾಗದ ಪಿಎಸ್‌ಐ ಎಂ. ಹಿರೇಗೌಡರ ಇತರರಿದ್ದರು. 
ಜಿಲ್ಲೆ

ಅಪರಾಧ ತಡೆಗೆ ಸಾರ್ವಜನಿಕರ ಸಹಕಾರ ಮುಖ್ಯ

Vijayapura - Desk - Gurappa Lokuri

ಕೆರೂರ: ಕೇವಲ ಪೊಲೀಸರಿಂದ ಅಪರಾಧಗಳ ತಡೆ ಸಾಧ್ಯವಿಲ್ಲ. ಇದಕ್ಕೆ ಸಾರ್ವಜನಿಕರ ಸಹಕಾರವೂ ಮುಖ್ಯ ಎಂದು ಸಿಪಿಐ ಕರಿಯಪ್ಪ ಬನ್ನೆ ಹೇಳಿದರು.

ಪಟ್ಟಣದ ಬಸ್ ನಿಲ್ದಾಣದಲ್ಲಿ ಪೊಲೀಸ್ ಇಲಾಖೆ, ಸಾರಿಗೆ ಇಲಾಖೆ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಓಸಿ, ಇಸ್ಪೇಟ್, ಜೂಜಾಟ ಆಡುತ್ತಿರುವುದು ಕಂಡು ಬಂದಲ್ಲಿ ಧೈರ್ಯವಾಗಿ ಪೊಲೀಸರಿಗೆ ಮಾಹಿತಿ ನೀಡಬೇಕು. ಪ್ರತಿಯೊಬ್ಬರೂ ತಮ್ಮ ಜೀವಿತಾವಧಿಯಲ್ಲಿ ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕು. ದುಶ್ಚಟ, ಅಪರಾಧ ಕೃತ್ಯಗಳಲ್ಲಿ ಭಾಗಿಯಾದವರ ವಿರುದ್ಧ ಮಾಹಿತಿ ನೀಡಿದರೆ ಸಮಾಜ ಸುಧಾರಣೆ ಮಾಡಿದಂತೆ ಎಂದರು.

ಸಾರಿಗೆ ಇಲಾಖೆ ಇನ್ಸ್‌ಪೆಕ್ಟರ್ ವಿ. ಡಿ. ಹಿರೇಮಠ ಮಾತನಾಡಿ, ವಾಹನ ಸವಾರರು ರಸ್ತೆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ವಾಹನಗಳ ದಾಖಲೆಗಳನ್ನು ಕಾಲಕಾಲಕ್ಕೆ ನವೀಕರಣ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಅಪರಾಧ ವಿಭಾಗದ ಪಿಎಸ್‌ಐ ಎಂ. ಹಿರೇಗೌಡರ ಮಾತನಾಡಿದರು.

ಸಿದ್ದು ದಳವಾಯಿ, ಅರ್ಜುನ್ ಭಜಂತ್ರಿ ಇದ್ದರು.