ಸಿದ್ದಾಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ಭೋದಕ ಮತ್ತು ಭೋದಕೇತರ ಸಿಬ್ಬಂದಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭ ನಡೆಯಿತು 
ಜಿಲ್ಲೆ

ಗುಣಾತ್ಮಕ ಫಲಿತಾಂಶ ಪ್ರಶಂಸನೀಯ

ಇಂದಿರಾ ಎನ್ ಕೆ

ವಿಜಯವಾಣಿ ಸುದ್ದಿಜಾಲ ಸಿದ್ದಾಪುರ

ಸಿದ್ದಾಪುರ ಪ್ರೌಢಶಾಲೆಯಲ್ಲಿ ಕಳೆದ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.100 ಗುಣಾತ್ಮಕ ಫಲಿತಾಂಶ ದಾಖಲಿಸಿದೆ. ಈ ಶಾಲೆ ಕುಂದಾಪುರ ವಲಯದಲ್ಲಿ ಅತ್ಯುತ್ತಮ ಸಾಧನೆ ಮೂಲಕ ಗುರುತಿಸಿಕೊಂಡಿರುವುದು ಪ್ರಶಂಸನೀಯ ಎಂದು ಕುಂದಾಪುರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ ಹೇಳಿದರು.

ಸಿದ್ದಾಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿದ ಪ್ರಯುಕ್ತ ಭೋದಕ ಮತ್ತು ಭೋದಕೇತರ ಸಿಬ್ಬಂದಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭ, ಪ್ರತಿಭಾ ಪುರಸ್ಕಾರ, ಕಡ್ರಿ ನಾರಾಯಣ ಮಾಸ್ಟರ್ ಮೆಮೋರಿಯಲ್ ಟ್ರಸ್ಟ್ ಸಿದ್ದಾಪುರ ವತಿಯಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ನೋಟ್‌ಬುಕ್ ಉಚಿತ ವಿತರಣಾ ಕಾರ್ಯಕ್ರಮದಲ್ಲಿ ಇತ್ತೀಚೆಗೆ ಮಾತನಾಡಿದರು.

ಕಡ್ರಿ ನಾರಾಯಣ ಮಾಸ್ಟರ್ ಮೆಮೋರಿಯಲ್ ಟ್ರಸ್ಟ್ ಅಧ್ಯಕ್ಷ ಡಾ.ಶ್ರೀಕಾಂತ ರಾವ್ ಉದ್ಘಾಟಿಸಿದರು. ಸಿದ್ದಾಪುರ ಗ್ರಾಪಂ ಅಧ್ಯಕ್ಷೆ ಶ್ರೀಲತಾ ಶೆಟ್ಟಿ ಅಧ್ಯಕ್ಷತೆ ವಹಿಸಿದರು. ಟ್ರಸ್ಟ್ ಗೌರವಾಧ್ಯಕ್ಷ ಎಸ್.ದೇವದಾಸ್ ಭಟ್, ಎಸ್‌ಡಿಎಂಸಿ ಅಧ್ಯಕ್ಷ ವಿಶ್ವನಾಥ ತುಂಬಿಕಲ್ಲಾಯ ಕೋಟೆ, ಮುಖ್ಯ ಶಿಕ್ಷಕ ಚಂದ್ರ ಕುಲಾಲ, ಉಳ್ಳೂರು-74 ಶ್ರೀ ಬನಶಂಕರಿ ದೇವಸ್ಥಾನ ಆಡಳಿತ ಧರ್ಮದರ್ಶಿ ಎಸ್.ಸಂಜೀವ ಶೆಟ್ಟಿ ಸಂಪಿಗೇಡಿ, ಸಿದ್ದಾಪುರ ಯಕ್ಷ ನುಡಿಸಿರಿ ಬಳಗದ ಅಧ್ಯಕ್ಷ ಡಾ.ಜಗದೀಶ ಶೆಟ್ಟಿ, ಉದ್ಯಮಿ ಡಿ.ಗೋಪಿನಾಥ ಕಾಮತ್, ಎಚ್.ಜಯಪ್ರಕಾಶ ಶೆಟ್ಟಿ, ಶ್ರೀಕಾಂತ ನಾಯಕ್ ಐರಬೈಲು, ಎಚ್.ಗಣೇಶ ಶೇಟ್, ಎನ್.ಶೇಖರ ಶೆಟ್ಟಿ ನೈಲ್‌ಕೋಡು, ಗೀತಾ ಶೆಟ್ಟಿ ಐರಬೈಲು ಮತ್ತಿತರರು ಉಪಸ್ಥಿತರಿದ್ದರು.

ಮನೋರಾಜ ಶೆಟ್ಟಿ ಜಾಂಬೂರು ಸ್ವಾಗತಿಸಿದರು. ಅಭಿನಂದನಾ ಸಮಿತಿ ಅಧ್ಯಕ್ಷ ಕೆ.ಭೋಜ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು. ಕೋಶಾಧಿಕಾರಿ ಭಾಸ್ಕರ ಶೆಟ್ಟಿ ಸಹಕರಿಸಿದರು. ಶಿಕ್ಷಕ ಸಂತೋಷ ಕುಮಾರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಅಭಿನಂದನಾ ಸಮಿತಿ ಕಾರ್ಯದರ್ಶಿ ಕೆ. ಸತೀಶಕುಮಾರ ಶೆಟ್ಟಿ ಕಡ್ರಿ ವಂದಿಸಿದರು.