ಕುಂದಾಪುರ: ಸರ್ಕಾರದ ಯಾವುದೇ ಯೋಜನೆಗಳು ಯಶಸ್ವಿಯಾಗಿ ಅನುಷ್ಠಾನವಾಗಬೇಕಾದಲ್ಲಿ ಸಾರ್ವಜನಿಕ ಸಹಭಾಗಿತ್ವ ಅತ್ಯಂತ ಅವಶ್ಯಕವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಅಭಿಪ್ರಾಯ ವ್ಯಕ್ತಪಡಿಸಿದರು.
ಕಂಡ್ಲೂರಿನ ಭವಾನಿ ಸಂಜೀವ ಶೆಟ್ಟಿ ಹಾಲ್‌ನಲ್ಲಿ ಬುಧವಾರ ನಡೆದ ಕುಂದಾಪುರ ಗ್ರಾವಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೃಷ್ಟಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.
ಗೃಹರಕ್ಷಕ ದಳದ ಜಿಲ್ಲಾ ಸೆಕೆಂಡ್ ಇನ್ ಕವಾಂಡ್ ರಾಜೇಶ್ ಕೆ.ಸಿ., ಕಂಡ್ಲೂರು ಮಸೀದಿ ಧರ್ಮಗುರು ಮೌಲಾನಾ ಇಲಿಯಾಜ್ ನದ್ವಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವಿಜಯ್ ಪುತ್ರನ್ ಹಾಗೂ ಉಡುಪಿಯ ಜಂಬೊ ಸ್ಟಾರ್ ಸೆಕ್ಯೂರಿಟಿ ಏಜಿನ್ಸಿಯ ವಿಜಯ್ ರ್ನಾಂಡಿಸ್ ಮಾತಾನಾಡಿದರು.
ಕಂಡ್ಲೂರು ಗ್ರಾಪಂ ಅಧ್ಯಕ್ಷೆ ನೌಸೀನ್ ಹಸ್ರತ್, ದೃಷ್ಟಿ ಯೋಜನೆ ಅಧ್ಯಕ್ಷ ಫಜಲ್ ಖಾಸಿಂ, ಪಿಡಿಒ ರೇಣುಕಾ ಶೆಟ್ಟಿ, ಗಣೇಶ್ ಕೋಟ ಇದ್ದರು.
ಕುಂದಾಪುರ ಉಪ ವಿಭಾಗದ ಡಿವೈಎಸ್‌ಪಿ ಎಚ್.ಡಿ.ಕುಲಕರ್ಣಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸರ್ಕಲ್ ಇನ್ಸ್‌ಪೆಕ್ಟರ್ ಜಯರಾಮ್ ಗೌಡ ಸ್ವಾಗತಿಸಿದರು. ಕಂಡ್ಲೂರು ಠಾಣಾಧಿಕಾರಿ ಭೀವಾಶಂಕರ್ ವಂದಿಸಿದರು. ಹೆಡ್‌ಕಾನ್‌ಸ್ಟೆಬಲ್ ಮಧುಸೂದನ್ ಉಪ್ಪಿನಕುದ್ರು ನಿರೂಪಿಸಿದರು.