ಚಡಚಣದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡ ಸಂಜೀವ ಐಹೊಳೆ ಮಾತನಾಡಿದರು. ಕಾಂತುಗೌಡ ಪಾಟೀಲ, ಬಸವರಾಜ ಬೈಚಬಾಳ ಇದ್ದರು. 
ಜಿಲ್ಲೆ

ಬೆಲೆ ಏರಿಕೆ ವಿರೋಧಿಸಿ ಜನಾಕ್ರೋಶ ಯಾತ್ರೆ

ದತ್ತಾತ್ರೇಯ ಪಿ ಕುಲಕರ್ಣಿ

ಚಡಚಣ: ರಾಜ್ಯ ಸರ್ಕಾರದ ಬೆಲೆ ಏರಿಕೆ ಹಾಗೂ ತೆರಿಗೆ ಹೆಚ್ಚಳ ವಿರೋದಿಸಿ ಏ.17 ರಂದು ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ನಡೆಯಲಿರುವ ಜನಾಕ್ರೋಶ ಯಾತ್ರೆಯಲ್ಲಿ ನಾಗಠಾಣ ಮತಕ್ಷೇತ್ರದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಬಿಜೆಪಿ ಮುಖಂಡ ಸಂಜೀವ ಐಹೊಳೆ ಮನವಿ ಮಾಡಿದರು.

ಮಂಗಳವಾರ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು, ಶೂನ್ಯ ಅಭಿವೃದ್ಧಿ ಮತ್ತು ಹಗರಣಗಳ ಸರ್ಕಾರ, ಬಜೆಟ್‌ನಲ್ಲಿ ಮುಸ್ಲಿಮರಿಗೆ ಓಲೈಕೆ ಮಾತ್ರವಲ್ಲದೆ ಹಿಂದುಗಳಿಗೆ ಅಪಮಾನ ಮಾಡಿದೆ. ಮುಸ್ಲಿಮರಿಗೆ ಮಾತ್ರ ಇಂಥ ಯೋಜನೆಗಳು ಏಕೆ? ಮೋದಿ ಅವರು ಜನಧನ ಸೇರಿ ಹಲವು ಯೋಜನೆ ಜಾರಿಗೊಳಿಸಿದ್ದು, ಎಲ್ಲರಿಗೂ ಅವಕಾಶ ನೀಡಿದ್ದಾರೆ. ಯಡಿಯೂರಪ್ಪ ಅವರು ಭಾಗ್ಯಲಕ್ಷ್ಮೀ ಯೋಜನೆ ಹಿಂದುಗಳಿಗೆ ಮಾತ್ರ ಕೊಟ್ಟಿಲ್ಲ, ಮುಸ್ಲಿಮರು ಸೇರಿ ಎಲ್ಲರಿಗೂ ಕೊಟ್ಟಿದ್ದಾರೆ ಎಂದರು.

ಚಡಚಣ ಮಂಡಲದ ಅಧ್ಯಕ್ಷ ಕಾಂತುಗೌಡ ಪಾಟೀಲ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಬಸವರಾಜ ಬೈಚಬಾಳ, ಜಿಲ್ಲಾ ಕಾರ್ಯದರ್ಶಿ ಕೃಷ್ಣಾ ಗುನ್ನಾಳಕರ ಮಾತನಾಡಿದರು. ಶ್ರೀಶೈಲ ಅಂಜುಟಗಿ, ರಾಜು ಕೋಳಿ ಇದ್ದರು.