ಜಿಲ್ಲೆ

ದ್ವಿತೀಯ ಪಿಯು ಪರೀಕ್ಷೆಯ ಮಾದರಿ ಉತ್ತರ ಪ್ರಕಟ; ಆಕ್ಷೇಪಣೆ ಸಲ್ಲಿಕೆಗೆ ನಾಡಿದ್ದೇ ಕಡೇ ದಿನ

Webdesk - Ravikanth

ಬೆಂಗಳೂರು: ಪ್ರಸ್ತುತ ನಡೆಯುತ್ತಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ (ಇಲ್ಲಿಯರೆಗೂ ನಡೆದಿರುವ) ಮಾದರಿ ಉತ್ತರಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತನ್ನ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿದೆ.

ಮಾ.3ರಿಂದ 23ರ ವರೆಗೆ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವಿಷಯವಾರು ಪ್ರಶ್ನೆಪತ್ರಿಕೆಗಳ ಮಾದರಿ ಉತ್ತರಗಳನ್ನು ಪ್ರಕಟಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದರೆ, ಪಾಲಕರು ಮತ್ತು ವಿದ್ಯಾರ್ಥಿಗಳು ಮಾ.27ರ ಸಂಜೆ 5 ಗಂಟೆಯೊಳಗೆ ಆನ್‌ಲೈನ್ ಮೂಲಕ ಸಲ್ಲಿಸಲು ಸೂಚಿಸಲಾಗಿದೆ.

ಮಾ.25ರಿಂದ 29ರ ವರೆಗೆ ನಡೆಯುವ ಪರೀಕ್ಷೆಗಳ ಮಾದರಿ ಉತ್ತರಗಳನ್ನು ನಂತರ ಬಿಡುಗಡೆ ಮಾಡಲಾಗುತ್ತದೆ ಎಂದು ಮಂಡಳಿ ತಿಳಿಸಿದೆ. ಆಕ್ಷೇಪಣೆಗಳನ್ನು jdexam.kseab@gmail.com ಇಲ್ಲಿಗೆ ಸಲ್ಲಿಸಬಹದು.

ವೆಬ್​ಸೈಟ್​ ವಿಳಾಸ: https://kseab.karnataka.gov.in/