ಕಡಬ: ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪುದ್ವರ್ ಬೊಕ್ಕ ಕುರಲ್ ಪರ್ಬ ಶಾಲಾ ಸಭಾಂಗಣದಲ್ಲಿ ನಡೆಯಿತು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ರಿಜಿಸ್ಟರ್ ಚಂದ್ರಹಾಸ ರೈ.ಬಿ.ಮಾತನಾಡಿ, ತುಳುನಾಡಿನ ಆಚರಣೆಗಳು ಪ್ರಕೃತಿ ಹಾಗೂ ಮಾನವನಿಗಿರುವ ಸಂಬಂಧವನ್ನು ಬೆಸೆಯುತ್ತಿವೆ ಎಂದರು.
ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಕಾರ್ಯದರ್ಶಿ ಸೇಸಪ್ಪ ರೈ ಮಾತನಾಡಿ, ವಿದ್ಯಾರ್ಥಿಗಳೆಲ್ಲರೂ ತಮ್ಮ ಮನೆಗಳಲ್ಲಿ ತುಳುನಾಡಿನ ಆಚರಣೆಗಳನ್ನು ಮಾಡಬೇಕು ಹಾಗೂ ತುಳುಕೂಟ ರಚಿಸಿ, ತುಳುನಾಡಿನ ಆಚಾರ ವಿಚಾರ ಸಂಸ್ಕೃತಿಯನ್ನು ಬೆಳೆಸುವ ನಿಟ್ಟಿನಲ್ಲಿ ಪಾಲಕರು ಕಾರ್ಯೋನ್ಮುಖರಾಗಬೇಕು ಎಂದರು.
ನೂಜಿಬಾಳ್ತಿಲ ತೆಗುರ್ ತುಳುಕೂಟ ಸಂಚಾಲಕ ಉಮೇಶ್ ಶೆಟ್ಟಿ ಸಾಯಿರಾಂ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಹರೀಶ್ ಬಾರಿಂಜ ಶುಭಹಾರೈಸಿದರು. ಸಂಸ್ಥೆಯ ಆಡಳಿತಾಧಿಕಾರಿ ಆನಂದ್ ಎಸ್.ಟಿ., ಸಿಬಿಎಸ್‌ಸಿ ಪ್ರಾಂಶುಪಾಲ ಪ್ರವೀದ್, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಿ ಲೋಹಿತ ಉಪಸ್ಥಿತರಿದ್ದರು. ಪ್ರೌಢಶಾಲಾ ಮುಖ್ಯಶಿಕ್ಷಕಿ ಗಾಯತ್ರಿ ಯು.ಎನ್ ಸ್ವಾಗತಿಸಿ, ಸಂಸ್ಥೆಯ ವ್ಯವಸ್ಥಾಪಕ ರಮೇಶ್ ರೈ ಬಿ.ಆರ್ ವಂದಿಸಿದರು. ಶಿಕ್ಷಕಿ ಸರಿತಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳ ಪಾಲಕರು, ಶಿಕ್ಷಕ ಶಿಕ್ಷಕೇತರ ವೃಂದ, ವಿದ್ಯಾರ್ಥಿಗಳು ಸಂಭ್ರಮದಿಂದ ಪಾಲ್ಗೊಂಡು ತುಳುನಾಡಿನ ವಿಶೇಷ ಪುದ್ವಾರ್ ಊಟವನ್ನು ಸವಿದರು.