ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇವಳದ ಗಜರಾಣಿ ಯಶಸ್ವಿಗೆ ಶನಿವಾರ ಬಲಿಪಾಡ್ಯಮಿ ದಿನ ಗಜಲಕ್ಷ್ಮಿ ಪೂಜೆ ನಡೆಯಿತು. ಕ್ಷೇತ್ರ ಪುರೋಹಿತ ಮಧುಸೂದನ ಕಲ್ಲೂರಾಯ ಯಶಸ್ವಿಗೆ ವಿವಿಧ ವೈದಿಕ ವಿಧಿವಿಧಾನಗಳೊಂದಿಗೆ ಪೂಜೆ ನೆರವೇರಿಸಿದರು.
ಆನೆಗೆ ಹಣ್ಣು-ಹಂಪಲು ತೆಂಗಿನಕಾಯಿ, ಅವಲಕ್ಕಿ, ಹೊದ್ಲು, ಬೆಲ್ಲ, ಹಣ್ಣು-ಹಂಪಲು, ತೆಂಗಿನ ಕಾಯಿ ಇತ್ಯಾದಿ ತಿನಿಸುಗಳನ್ನು ನೀಡಿ ಮಂಗಳಾರತಿ ಬೆಳಗಿದರು. ಶ್ರೀ ದೇವಳದಲ್ಲಿ ವರ್ಷದಲ್ಲಿ ಎರಡು ಬಾರಿ ಅಂದರೆ ನವರಾತ್ರಿ ಮತ್ತು ದೀಪಾವಳಿಗೆ ಗಜಲಕ್ಷ್ಮಿ ಪೂಜೆ ನೆರವೇರುತ್ತದೆ.
ಶ್ರೀ ದೇವಳದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್, ಶ್ರೀ ದೇವಳದ ಅಧೀಕ್ಷಕ ಪದ್ಮನಾಭ ಶೆಟ್ಟಿಗಾರ್, ಎಕೌಂಟೆಂಟ್ ರಾಜಲಕ್ಷ್ಮಿ ಪಿ.ಶೆಟ್ಟಿಗಾರ್, ದೇವಳದ ಹೆಬ್ಬಾರ್ ಪ್ರಸನ್ನ ಭಟ್, ಶ್ರೀ ದೇವಳದ ಪಾಟಾಳಿ ಲೋಕೇಶ್ ಎ.ಆರ್., ರಾಘವೇಂದ್ರ ಭಟ್, ನಂದೀಶ್ ಕಟ್ರಮನೆ, ಗುರುಪ್ರಸಾದ್ ಸೇರಿದಂತೆ ದೇವಳದ ಸಿಬ್ಬಂದಿ ಮತ್ತು ಭಕ್ತರು ಉಪಸ್ಥಿತರಿದ್ದರು.