ಜಿಲ್ಲೆ

ಬೋರ್‌ವೆಲ್ ಪೂಜೆ ಮಾಡುವ ವೇಳೆ ಹಾವು ಕಡಿದು ಮಹಿಳೆ ಸಾವು

Haveri - Kariyappa Aralikatti

ರಾಣೆಬೆನ್ನೂರ: ಹಾವು ಕಡಿದು ಮಹಿಳೆಯೊಬ್ಬಳು ಮೃತಪಟ್ಟ ಘಟನೆ ತಾಲೂಕಿನ ಯರೇಕುಪ್ಪಿ ಗ್ರಾಮದಲ್ಲಿ ಬುಧವಾರ ಸಂಭವಿಸಿದೆ.
ಇಂದ್ರಮ್ಮ ರಾಮಪ್ಪ ಹಾದಿಮನಿ (56) ಮೃತ ಮಹಿಳೆ.
ಇವರು ಜಮೀನಿನಲ್ಲಿ ಬೋರ್‌ವೆಲ್ ಪೂಜೆ ಮಾಡಲು ಹೋದ ಸಮಯದಲ್ಲಿ ಹಾವು ಕಡಿದು ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ರಾಣೆಬೆನ್ನೂರ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.