ಜಿಲ್ಲೆ

ಯಕ್ಷಗಾನ ಮೂಲಕ ಅಧ್ಯಾತ್ಮ ಚಿಂತನೆ : ಡಾ.ಪ್ರಭಾಕರ ಭಟ್ ಅಭಿಪ್ರಾಯ

ಸೌಮ್ಯ ಆರ್

ಬಂಟ್ವಾಳ: ರಾಮಯ್ಯ ಶೆಟ್ಟಿ ಅವರು ಪರಂಪರೆಯನ್ನು ಉಳಿಸಿದವರು. ಯಕ್ಷಗಾನ ಮೂಲಕ ಅಧ್ಯಾತ್ಮ ಮತ್ತು ವೈಚಾರಿಕ ಚಿಂತನೆಯನ್ನು ಸಾಮಾನ್ಯ ಜನರಿಗೆ ತಲುಪಿಸುವ ಪ್ರಯತ್ನ ಮಾಡಿದವರು ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘ ಅಧ್ಯಕ್ಷ ಕಲ್ಲಡ್ಕ ಡಾ.ಪ್ರಭಾಕರ ಭಟ್ ಹೇಳಿದರು.

ಶ್ರೀ ಕಲ್ಲುರ್ಟಿ ದೈವಸ್ಥಾನ, ಚಂಡೆ ಹಾಗೂ ಪುಳಿಂಚ ಸೇವಾ ಪ್ರತಿಷ್ಠಾನ ಆಶ್ರಯದಲ್ಲಿ ಯಕ್ಷಗಾನ ಕಲಾವಿದ ಬೆಜ್ಜದಗುತ್ತು ಪುಳಿಂಚ ರಾಮಯ್ಯ ಶೆಟ್ಟಿ ಸ್ಮರಣಾರ್ಥ ಬೊಳ್ನಾಡುಗುತ್ತು ದಿ.ಸರೋಜಿನಿ ರಾಮಯ್ಯ ಶೆಟ್ಟಿ ಪುಳಿಂಚ ವೇದಿಕೆಯಲ್ಲಿ ಶನಿವಾರ ಪಂಚಮ ತ್ರೈವಾರ್ಷಿಕ ‘ಪುಳಿಂಚ ಪ್ರಶಸ್ತಿ’ ಪ್ರದಾನಿಸಿ ಮಾತನಾಡಿದರು.

ಆರ್‌ಎಸ್‌ಎಸ್ ಮುಖಂಡ ಪ್ರಕಾಶ್ ಪಿ.ಎಸ್., ವಿಧಾನಪರಿಷತ್ ಸದಸ್ಯ ಕಿಶೋರ್‌ಕುಮಾರ್ ಬೊಟ್ಯಾಡಿ, ದೈವಜ್ಞ ಶಶಿಕುಮಾರ್ ಪಂಡಿತ್ ಮಂಗಳೂರು, ಯಕ್ಷಾಂಗಣ ಅಧ್ಯಕ್ಷ ಭಾಸ್ಕರ್ ರೈ ಕುಕ್ಕುವಳ್ಳಿ, ಪುಳಿಂಚ ಸೇವಾ ಪ್ರತಿಷ್ಠಾನ ಕೋಶಾಧಿಕಾರಿ, ಪುಳಿಂಚ ಚಿಟ್ಸ್‌ನ ಮ್ಯಾನೇಜಿಂಗ್ ಡೈರೆಕ್ಟರ್ ಪ್ರತಿಭಾ ಶೆಟ್ಟಿ ಉಪಸ್ಥಿತರಿದ್ದರು. ಬೋಳಾರ ಸುಬ್ಬಯ್ಯ ಶೆಟ್ಟಿ, ಸಂಜಯ ಕುಮಾರ್ ಶೆಟ್ಟಿ ಗೋಣಿಬೀಡು, ಮಿಜಾರು ತಿಮ್ಮಪ್ಪ ಅವರಿಗೆ ಪುಳಿಂಚ ಪ್ರಶಸ್ತಿ ಹಾಗೂ ಬಂಟ್ವಾಳ ಜಯರಾಮ ಆಚಾರ್ಯ ಅವರಿಗೆ ಮರಣೋತ್ತರ ಪುಳಿಂಚ ಪ್ರಶಸ್ತಿ ನೀಡಲಾಯಿತು.

ಪುಳಿಂಚ ಸೇವಾ ಪ್ರತಿಷ್ಠಾನ ಅಧ್ಯಕ್ಷ ಶ್ರೀಧರ ಶೆಟ್ಟಿ ಪುಳಿಂಚ ಸ್ವಾಗತಿಸಿದರು. ಅಶೋಕ್ ಭಟ್ ಉಜಿರೆ ನಿರೂಪಿಸಿದರು. ಯಕ್ಷಗಾನ ಸಂಘಟಕ ಜನಾರ್ದನ ಅಮ್ಮುಂಜೆ ಸಹಕರಿಸಿದರು.