ಜಿಲ್ಲೆ

ಚಾಮರಾಜನಗರ ಜಿಲ್ಲಾ ಅಭಿವೃದ್ಧಿ ರಾಯಭಾರಿಯಾಗಲು ನಟ ಪುನೀತ್​ ರಾಜ್​ಕುಮಾರ್​ ಸಮ್ಮತಿ

ರಮೇಶ್​ ಕುಮಾರ್​​ ಬಿ ಎಡಮೋಳೆ

ಚಾಮರಾಜನಗರ: ರಾಜ್ಯದ ಗಡಿ ಜಿಲ್ಲೆಯಾದ ಚಾಮರಾಜನಗರದ ಜಿಲ್ಲಾ ಅಭಿವೃದ್ಧಿ ರಾಯಭಾರಿಯಾಗಲು ನಟ ಪುನೀತ್​ ರಾಜ್​ಕುಮಾರ್ ಅವರು ಸಮ್ಮತಿಸಿದ್ದಾರೆ.

ಪುನೀತ್​ ಮೂಲತಃ ಚಾಮರಾಜನಗರ ಜಿಲ್ಲೆಯವರಾಗಿರುವುದರಿಂದ​ ರಾಯಭಾರಿಯಾಗಲು ಖುಷಿಯಿಂದಲೇ ಒಪ್ಪಿಕೊಂಡಿದ್ದಾರೆ. ಹೀಗಾಗಿ ಪ್ರಾಥಮಿಕ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್​. ಸುರೇಶ್​ ಕುಮಾರ್​ ಅವರು ಪುನೀತ್​ ಅವರನ್ನು ಆಹ್ವಾನಿಸಲು ಜಿಲ್ಲಾ ಮುಖಂಡರ ಸಮ್ಮುಖದಲ್ಲಿ ಅವರ ನಿವಾಸಕ್ಕೆ ತೆರಳಿದ್ದಾರೆ.

ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ಸದಾಶಿವ ನಗರದಲ್ಲಿರುವ ಪುನೀತ್​ ನಿವಾಸಕ್ಕೆ ಭೇಟಿ ನೀಡಿ ಆಹ್ವಾನಿಸಲಿದ್ದಾರೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಕಟಣೆಯನ್ನು ಹೊರಡಿಸಿದೆ.