ಅಪರಿಚಿತ ವಾಹನ ಡಿಕ್ಕಿಹೊಡೆದ ಪರಿಣಾಮ ಗುಂಡ್ಲುಪೇಟೆ ಬಂಡೀಪುರ ರಸ್ತೆಯಲ್ಲಿ ಪುನಗು ಬೆಕ್ಕು ಮೃತಪಟ್ಟಿರುವುದು. 
ಜಿಲ್ಲೆ

ಅಪರಿಚಿತ ವಾಹನ ಡಿಕ್ಕಿಯಾಗಿ ಪುನುಗು ಬೆಕ್ಕು ಮೃತ

ಅಭಿನಯ್ ಎಚ್.ಎಂ

ಗುಂಡ್ಲುಪೇಟೆ: ಬಂಡೀಪುರ ಹುಲಿ ಯೋಜನೆಯ ಗೋಪಾಲಸ್ವಾಮಿ ಬೆಟ್ಟ ವಲಯಾರಣ್ಯ ಕಚೇರಿಯಿಂದ ಅನತಿ ದೂರದಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಅಪರೂಪದ ಪುನುಗುಬೆಕ್ಕು ಮೃತಪಟ್ಟಿದೆ.

ಗುರುವಾರ ರಾತ್ರಿ 9 ಗಂಟೆ ವೇಳೆಯಲ್ಲಿ ಬೆಂಗಳೂರು-ಊಟಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಸಾಗುತ್ತಿದ್ದ ವಾಹನ ಡಿಕ್ಕಿ ಹೊಡೆದಿದೆ. ಏಷ್ಯಾ ಹಾಗೂ ಆಫ್ರಿಕಾ ಕಾಡುಗಳಲ್ಲಿ ಹೆಚ್ಚಾಗಿ ವಾಸಿಸುವ ಪುನುಗು ಬೆಕ್ಕು ಎಸ್ಟೇಟ್‌ಗಳಲ್ಲಿಯೂ ಕಂಡುಬರುತ್ತಿದೆ. ಇತ್ತೀಚೆಗೆ ಬಂಡೀಪುರದ ನಾನಾ ವಲಯಗಳಲ್ಲಿಯೂ ಕಣ್ಣಿಗೆ ಬೀಳುತ್ತಿದೆ.

ಬೆಕ್ಕಿನ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಅಂತ್ಯಸಂಸ್ಕಾರ ಮಾಡಲಾಗುವುದು ಎಂದು ಗೋಪಾಲಸ್ವಾಮಿ ಬೆಟ್ಟ ವಲಯಾರಣ್ಯಾಧಿಕಾರಿ ಮಂಜುನಾಥ್ ತಿಳಿಸಿದ್ದಾರೆ.