ಜಿಲ್ಲೆ

20 ಸಾವಿರ ವಿದ್ಯಾರ್ಥಿಗಳಿಗೆ ಮೇ 30ರಂದು ಸಿಹಿ ತಿಂಡಿ

ಪ್ರಶಾಂತ ಜಿ. ಭಾಗ್ವತ

ಶಾಸಕ ಯಶ್​ಪಾಲ್​ ಮಾಹಿತಿ

ಮಕ್ಕಳಿಗೆ ಭವ್ಯವಾಗಿ ಸ್ವಾಗತ

ವಿಜಯವಾಣಿ ಸುದ್ದಿಜಾಲ ಉಡುಪಿ

ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸರ್ಕಾರಿ, ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಯ 20 ಸಾವಿರ ವಿದ್ಯಾರ್ಥಿಗಳಿಗೆ ಮೇ 30ರ ಶಾಲಾ ಪುನರಾರಂಭದ ದಿನದಂದು ನಮ್ಮ ಪುಷ್ಪಾನಂದ ಫೌಂಡೇಷನ್​ ವತಿಯಿಂದ ಸಿಹಿ ತಿಂಡಿ ನೀಡಿ ಸ್ವಾಗತಿಸುತ್ತಿದ್ದೇವೆ ಎಂದು ಫೌಂಡೇಷನ್​ ಅಧ್ಯಕ್ಷ ಹಾಗೂ ಉಡುಪಿ ಶಾಸಕ ಯಶ್​ಪಾಲ್​ ಸುವರ್ಣ ತಿಳಿಸಿದ್ದಾರೆ.

ಕ್ಷೇತ್ರ ವ್ಯಾಪ್ತಿಯ 125 ಶಾಲೆಯ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಿಸಲು ಸಿದ್ಧತೆ ಮಾಡಲಾಗಿದೆ.

ಶಾಲೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ವಿವಿಧ ಶಾಲೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳನ್ನು ಸ್ವಾಗತಿಸಲಿದ್ದೇವೆ. ಸ್ಥಳೀಯ ಜನಪ್ರತಿನಿಧಿಗಳು, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಶಿಕ್ಷಣ ಪ್ರೇಮಿಗಳು ತಮ್ಮ ವ್ಯಾಪ್ತಿಯ ಶಾಲೆಗಳ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಕ್ಕಳ ಸಂಭ್ರಮ ಇಮ್ಮಡಿಗೊಳಿಸುವಂತೆ ಶಾಸಕ ಯಶ್​ಪಾಲ್​ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.