ಜಿಲ್ಲೆ

ದುಬಾರಿ ಡೊನೇಷನ್‌ಗೆ ಬ್ರೇಕ್ ಹಾಕಿ

ಎನ್.ವೆಂಕಟೇಶ್

 ಜಿಲ್ಲಾಧಿಕಾರಿಗೆ ಕನ್ನಡ ಸೇನೆ ಒತ್ತಾಯ

ಚಿಕ್ಕಬಳ್ಳಾಪುರ: ದುಬಾರಿ ಡೊನೇಷನ್ ಹಾಗೂ ಇತರ ಶುಲ್ಕ ವಸೂಲಿ ಮಾಡುತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕನ್ನಡಸೇನೆ ಜಿಲ್ಲಾಡಳಿತವನ್ನು ಒತ್ತಾಯಿಸಿದೆ.

ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದ ಸಂಘಟನೆಯ ಪದಾಧಿಕಾರಿಗಳು, ಮಕ್ಕಳ ದಾಖಲಾತಿಗೆ ಪಾಲಕರು ಅನುಭವಿಸುತ್ತಿರುವ ಸಮಸ್ಯೆಗಳನ್ನು ಗಮನಕ್ಕೆ ತಂದರು.

ಪ್ರಸಕ್ತ ಸಾಲಿನಲ್ಲಿ ಶಾಲಾಕಾಲೇಜುಗಳಲ್ಲಿ ದಾಖಲಾತಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಕೆಲ ಶಿಕ್ಷಣ ಸಂಸ್ಥೆಗಳು ಹೆಚ್ಚಿನ ಶುಲ್ಕ ವಸೂಲಿ ಮಾಡುತ್ತಿವೆ. ಕೇಳಿದಷ್ಟು ಹಣ ನೀಡದಿದ್ದರೆ ದಾಖಲಾತಿ ನಿರಾಕರಿಸಲಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.

ಪ್ರತಿ ಶಿಕ್ಷಣ ಸಂಸ್ಥೆಗಳಲ್ಲಿ ದಾಖಲಾತಿ ಶುಲ್ಕ ಪಟ್ಟಿಯ ಮಾಹಿತಿಯ ಲಕ ಅಳವಡಿಸಬೇಕು. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಬೇಕು. ನಿಯಮ ಉಲ್ಲಂಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕನ್ನಡಸೇನೆಯ ಜಿಲ್ಲಾಧ್ಯಕ್ಷ ರವಿಕುವಾರ್, ಪದಾಧಿಕಾರಿ ಸುಬ್ರಮಣಿ, ಶ್ರೀಧರ್, ಕೆ.ಎನ್.ಉದಯಶಂಕರ್, ಶಿವಕುವಾರ್, ಬಾಲರಾಜು, ಮೋಹನ್ ಕುವಾರ್, ಶ್ರವಣಕುವಾರ್ ಮತ್ತಿತರರು ಇದ್ದರು.