ಸ್ವಾತಂತ್ರೃ ಹೋರಾಟಗಾರ ಎಂ.ಡಿ. ಅಧಿಕಾರಿ ಅವರ ಪುತ್ಥಳಿ ಅನಾವರಣದ ಸಭಾ ಕಾರ್ಯಕ್ರಮವನ್ನು ಶಾಸಕ ಸುನೀಲ್ ಕುಮಾರ್ ಉದ್ಘಾಟಿಸಿದರು 
ಜಿಲ್ಲೆ

ದೇಶಪ್ರೇಮ, ನಿಷ್ಠೆಗೆ ಎಂ.ಡಿ. ಅಧಿಕಾರಿ ಸಾಕ್ಷಿ

ಇಂದಿರಾ ಎನ್ ಕೆ

ವಿಜಯವಾಣಿ ಸುದ್ದಿಜಾಲ ಹೆಬ್ರಿ

ಸ್ವಾತಂತ್ರೃ ಹೋರಾಟಗಾರ ಎಂ.ಡಿ. ಅಧಿಕಾರಿ ಬಗೆಗೆ ಇರುವ ಅಭಿಮಾನಕ್ಕೆ ಪಡುಕುಡೂರು ಸಾಕ್ಷಿಯಾಗಿದೆ. ದೇಶ ಪ್ರೇಮ, ಧೈರ್ಯ, ಸಾಹಸ, ಕರ್ತವ್ಯ ನಿಷ್ಠೆಗೆ ಎಂ.ಡಿ. ಅಧಿಕಾರಿ ಸಾಕ್ಷಿ ಎಂದು ಮಾಜಿ ಮುಖ್ಯಮಂತ್ರಿ ಡಾ.ಎಂ.ವೀರಪ್ಪ ಮೊಯ್ಲಿ ಹೇಳಿದರು.

ಪಡುಕುಡೂರು ಬೀಡು ಎಂ.ಡಿ.ಅಧಿಕಾರಿ ಪುತ್ಥಳಿ ಗುರುವಾರ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಪ್ರತಿಮೆ ಪ್ರತಿಷ್ಠಾಪನೆಯ ರೂವಾರಿ ಪಡಕುಪರ್ಕಳ ಶಂಕರ ಶೆಟ್ಟಿ ಮಾತನಾಡಿ, ಎಂ.ಡಿ.ಅಧಿಕಾರಿ ಅವರ ಪ್ರತಿಮೆ ಸ್ಥಾಪನೆ ನನ್ನ ಬಾಲ್ಯದ ಕನಸು. ಸರ್ವ ಸಹಕಾರದಲ್ಲಿ ಆ ಕನಸು ನನಸಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಪುತ್ಥಳಿ ಪ್ರತಿಷ್ಠಾಪನಾ ಸಮಿತಿ ಅಧ್ಯಕ್ಷ ಪಡುಕುಡೂರು ಪಟೇಲರ ಮನೆ ಜಗದೀಶ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಪ್ರತಿಮೆ ಪ್ರತಿಷ್ಠಾಪನೆಯ ರೂವಾರಿ ಪಡಕುಪರ್ಕಳ ಶಂಕರ ಶೆಟ್ಟಿ ದಂಪತಿಯನ್ನು ಎಂ.ಡಿ.ಅಧಿಕಾರಿ ಕುಟುಂಬಸ್ಥರು ಗೌರವಿಸಿದರು. ಮಾಜಿ ಯೋಧರು, ಪಡುಕುಡೂರು ಪರಿಸರದ ಶೈಕ್ಷಣಿಕ ಸಾಧಕರು ಹಾಗೂ ದಾನಿಗಳನ್ನು, ಸಹಕರಿಸಿದವರನ್ನು ಗೌರವಿಸಲಾಯಿತು.

ಎಂ.ಡಿ.ಅಧಿಕಾರಿ ಪುತ್ರಿ ಅಭಯಲಕ್ಷ್ಮೀ, ಶಾಸಕ ಸುನೀಲ್ ಕುಮಾರ್, ಮುಖಂಡ ಮುನಿಯಾಲು ಉದಯ ಕುಮಾರ್ ಶೆಟ್ಟಿ, ಮಾಜಿ ಸಚಿವ ಅಭಯಚಂದ್ರ ಜೈನ್, ವಕೀಲರಾದ ಎಂ.ಕೆ.ವಿಜಯ ಕುಮಾರ್, ಡಾ.ಎಂ.ಎಸ್.ರಾವ್ ಮುದ್ರಾಡಿ, ಡಾ.ಜಯರಾಮ ಹೆಗ್ಡೆ ಪಡುಕುಡೂರು, ಪಡುಕುಡೂರು ದೇವಸ್ಥಾನ ಆಡಳಿತ ಮೊಕ್ತೇಸರ ದೊಡ್ಡಮನೆ ಪ್ರಶಾಂತ ಶೆಟ್ಟಿ, ಮೆಲ್ಬೇಟ್ಟು ಕೃಷ್ಣ ಶೆಟ್ಟಿ, ಬಾಲಕೃಷ್ಣ ಶೆಟ್ಟಿ ಚಿಕ್ಕಮಾರಬೆಟ್ಟು, ಅರುಣ್ ಶೆಟ್ಟಿ ಮತ್ತಾವು, ಜಯಕರ ಶೆಟ್ಟಿ ಕೊಡಂಜ, ವರಂಗ ಸಹಕಾರಿ ಸಂಘ ಅಧ್ಯಕ್ಷ ಲಕ್ಷ್ಮಣ ಆಚಾರ್, ಮುನಿಯಾಲು ಲಯನ್ಸ್ ಕ್ಲಬ್ ಗೋಪಿನಾಥ್ ಭಟ್, ಪಡುಕುಡೂರು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರವಿ ಶೆಟ್ಟಿ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಸನ್ನ ಶೆಟ್ಟಿ ಜಯಲೀಲಾ, ಮುಖ್ಯ ಶಿಕ್ಷಕ ಹರೀಶ್ ಪೂಜಾರಿ, ಸಮಿತಿ ಗೌರವಾಧ್ಯಕ್ಷ ಸದಾಶಿವ ಉಪಾಧ್ಯಾಯ, ಪ್ರಧಾನ ಕಾರ್ಯದರ್ಶಿ ಹರೀಶ್ ಶೆಟ್ಟಿ ಪಡುಪರ್ಕಳ, ಕೋಶಾಧಿಕಾರಿ ಅಶೋಕ ಎಂ.ಶೆಟ್ಟಿ, ಉಪಾಧ್ಯಕ್ಷ ಹೃದಯ ಕುಮಾರ್ ಶೆಟ್ಟಿ ಮೊದಲಾದವರು ಪಾಲ್ಗೊಂಡಿದ್ದರು. ಶಂಕರ ಶೆಟ್ಟಿ ಪೂಜಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾತಿಬೆಟ್ಟು ಪ್ರಕಾಶ ಪೂಜಾರಿ ಮತ್ತು ಪಡುಕುಡೂರು ರಂಜಿತಾ ನಿರೂಪಿಸಿದರು. ಜನಾರ್ದನ್ ಆಚಾರ್ಯ ಹೊಸವಕ್ಲು ವಂದಿಸಿದರು.

ನಮ್ಮ ಪಾಲಿನ ಹೆಮ್ಮೆ, ನಮಗೆ ಸ್ವಾತಂತ್ರೃ ಹೋರಾಟದಲ್ಲಿ ಭಾಗಿಯಾಗುವ ಅವಕಾಶ ದೊರೆತಿಲ್ಲ. ಆದರೂ ಮಹಾನ್ ನಾಯಕನ ಪುತ್ಥಳಿ ಪ್ರತಿಷ್ಠಾಪನೆಯಲ್ಲಿ ಭಾಗಿಯಾಗುವ ಪುಣ್ಯದ ಅವಕಾಶ ಸಿಕ್ಕಿದೆ.-ಸುನೀಲ್ ಕುಮಾರ್, ಶಾಸಕರು ಕಾರ್ಕಳ