ಜಿಲ್ಲೆ

ವೈಯಕ್ತಿಕ ವ್ಯವಹಾರಕ್ಕೂ ಪುತ್ತಿಲ ಪರಿವಾರಕ್ಕೂ ಸಂಬಂಧವಿಲ್ಲ

ಪುತ್ತೂರು: ವಿಧಾನಸಭಾ ಚುನಾವಣೆಯಲ್ಲಿ ಕಾರ್ಯಕರ್ತರ ಒತ್ತಾಯದಂತೆ ಪಕ್ಷೇತರರಾಗಿ ಸ್ಪಂದಿಸಿದ ಪುತ್ತಿಲಪರಿವಾರ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಅವರ ಪ್ರಚಾರ ಕಾರ್ಯದಲ್ಲಿ ದುಡಿದ ವ್ಯಕ್ತಿಗಳ ವೈಯಕ್ತಿಕ ವ್ಯವಹಾರಕ್ಕೂ ನಮ್ಮ ಪುತ್ತಿಲ ಪರಿವಾರಕ್ಕೂ ಯಾವುದೇ ಸಂಬಂಧವಿಲ್ಲ ಎಂಬ ಸ್ಪಷ್ಟನೆಯನ್ನು ಪರಿವಾರ ನೀಡಿದೆ.

ಚುನಾವಣೆಯ ಕೊನೆಯ ಕ್ಷಣದಲ್ಲಿ ಸ್ಪರ್ಧೆ ಮಾಡುವುದು ದೃಢಪಟ್ಟಿದ್ದು, ೨೦ ದಿನದಲ್ಲಿ ನಡೆದ ಪ್ರಚಾರ ಕಾರ್ಯದಲ್ಲಿ ತಾಲೂಕು, ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಸಾವಿರಾರು ಕಾರ್ಯಕರ್ತರು ದುಡಿದಿರುವವರಲ್ಲಿ ನೇರಳಕಟ್ಟೆಯ ವ್ಯಕ್ತಿಯೊಬ್ಬರಾಗಿದ್ದು, ಈಗ ಸಾಮಾಜಿಕ ಜಾಲತಾಣದಲ್ಲಿ ಅವರ ವಿರುದ್ಧ ಕೆಲವು ಆರೋಪಗಳು ಕೇಳಿ ಬರುತ್ತಿದೆ.

ಸಾಮಾಜಿಕ ಜಾಲತಾಣದಲ್ಲಿ ಬಂದ ದೂರಿನ ಪ್ರತಿಯಲ್ಲಿಯೂ ಪುತ್ತಿಲ ಪರಿವಾರದ ಬಗ್ಗೆ ಉಲ್ಲೇಖವಿಲ್ಲ. ಈ ಸಾಮಾಜಿಕ ಜಾಲತಾಣದಲ್ಲಿ ಬರುತ್ತಿರುವ ವಿಷಯ ಹಗರಿಬೊಮ್ಮನಹಳ್ಳಿಯ ಕ್ಷೇತ್ರದ ರಾಷ್ಟ್ರೀಯ ಪಕ್ಷದ ಟಿಕೇಟ್ ವಿಷಯದಲ್ಲಿ ನಾಯಕರ ನಡುವೆ ಚುನಾವಣ ಪೂರ್ವ ವ್ಯವಹಾರವಾಗಿದ್ದು, ಆ ಆರೋಪದಲ್ಲಿ ಪುತ್ತಿಲ ಪರಿವಾರದ ಹೆಸರು ಪ್ರಸ್ತಾಪ ಮಾಡಿರುವುದು ಸರಿಯಲ್ಲ.