ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಂಗ ಇಲಾಖೆ, ಲೋಕೋಪಯೋಗಿ ಇಲಾಖೆ ಹಾಗೂ ಪುತ್ತೂರು ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ಪುತ್ತೂರಿನ ಆನೆಮಜಲಿನಲ್ಲಿ ನೂತನವಾಗಿ ನಿರ್ಮಿಸಿರುವ ವಕೀಲರ ಸಂಘದ ಕಟ್ಟಡವನ್ನು ಮಂಗಳವಾರ ಸುಪ್ರೀಂಕೋಟ್೯ ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಅವರು ಕಟ್ಟಡದ ಆವರಣದಲ್ಲಿ ಸಸಿಯೊಂದನ್ನು ನೆಟ್ಟರು. ಹೈಕೋರ್ಟ್‍ನ ನ್ಯಾಯಾಧೀಶರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಆಡಳಿತಾತ್ಮಕ ನ್ಯಾಯಾಧೀಶ ಕೆ. ಸೋಮಶೇಖರ್, ಹೈಕೋರ್ಟ್‍ನ ನ್ಯಾಯಾಧೀಶರಾದ ಮೊಹಮ್ಮದ್ ನವಾಜ್ ಮತ್ತು ಎಸ್. ವಿಶ್ವಜಿತ್ ಶೆಟ್ಟಿ, ಶಾಸಕ ಸಂಜೀವ ಮಠಂದೂರು, ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ, ಹೆಚ್ಚುವರಿ ಅಡ್ವಕೇಟ್ ಜನರಲ್ ಅರುಣ್ ಶ್ಯಾಮ್, ರಾಜ್ಯ ವಕೀಲರ ಪರಿಷತ್ತನ ಅಧ್ಯಕ್ಷ ಎಲ್. ಶ್ರೀನಿವಾಸ ಬಾಬು ಹಾಗೂ ವಕೀಲರ ಪರಿಷತ್ ಅಧ್ಯಕ್ಷ ಪಿ.ಪಿ ಹೆಗ್ಡೆ, ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಮುರಲಿಧರ ಪೈ, ಬಿ. ಮೊದಲಾದವರು ಉಪಸ್ಥಿತರಿದ್ದರು.