ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಪುತ್ತೂರು ನಗರ ಠಾಣೆಗೆ ಕಾಂಗ್ರೆಸ್ ಪ್ರಚಾರ ಸಮಿತಿಯಿಂದ ದೂರು ನೀಡಲಾಯಿತು. ಪ್ರಮುಖರಾದ ಡಾ.ರಾಜಾರಾಮ್ ಕೆ.ಬಿ., ಎಚ್.ಮಹಮ್ಮದ್ ಅಲಿ, ಎನ್.ಚಂದ್ರಹಾಸ ಶೆಟ್ಟಿ, ಶಶಿಕಿರಣ್ ರೈ ಇತರರು ಇದ್ದರು.
ಪುತ್ತೂರು: ರಾಹುಲ್ ಗಾಂಧಿ ವಂಶ ನಾಶ ಮಾಡುವ ಹೇಳಿಕೆ ನೀಡಿರುವ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಕಾಂಗ್ರೆಸ್ ಪ್ರಚಾರ ಸಮಿತಿಗಳ ವತಿಯಿಂದ ಪುತ್ತೂರು ನಗರ ಠಾಣೆಗೆ ದೂರು ಸಲ್ಲಿಸಲಾಯಿತು. ಪ್ರಚಾರ ಸಮಿತಿ ಪುತ್ತೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಡಾ.ರಾಜಾರಾಮ್ ಕೆ.ಬಿ. ದೂರು ನೀಡಿದರು.
ದ.ಕ. ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಮಹಮ್ಮದ್ ಅಲಿ, ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯ ಸಂಯೋಜಕ ಎನ್.ಚಂದ್ರಹಾಸ ಶೆಟ್ಟಿ, ಶಶಿಕಿರಣ್ ರೈ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಮರನಾಥ್ ಗೌಡ, ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಗಣೇಶ್ ರಾಜ್ ಬಿಳಿಯೂರು, ಕಡಬ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಯತೀಶ್ ಕುಮಾರ್ ಗೌಡ ಬಾನಡ್ಕ, ಪುತ್ತೂರು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ್ ಶೆಟ್ಟಿ ಪೆರ್ನೆ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ರೋಷನ್ ರೈ ಬನ್ನೂರು, ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಕಾರ್ಯಾಧ್ಯಕ್ಷ ವಿಕ್ರಂ ಶೆಟ್ಟಿ, ಪ್ರಮುಖರಾದ ಮೌರಿಸ್ ಮಸ್ಕರೇನಸ್, ರಿಯಾಜ್ ಪರ್ಲಡ್ಕ, ಶಿವರಾಮ್ ಆಳ್ವ, ಪ್ರಹ್ಲಾದ್ ಬೆಳ್ಳಿಪ್ಪಾಡಿ, ರಾಜೇಶ್ ಶೆಟ್ಟಿ ಕೋಡಿಂಬಾಡಿ, ಕಬೀರ್ ಕರ್ವೇಲು ಮತ್ತಿತರರು ಉಪಸ್ಥಿತರಿದ್ದರು.