ಪುತ್ತೂರು: ಕಂಬಳದಲ್ಲಿ ಉತ್ತಮ ಕೆಲಸ ಮಾಡಿದವರಿಗೆ ಸಮಾಜದಲ್ಲಿ ಉತ್ತಮ ಸ್ಥಾನ ಮಾನ ಸಿಗುತ್ತದೆ ಎಂಬುದಕ್ಕೆ ಸ್ಪಷ್ಟ ನಿದರ್ಶನವನ್ನು ಕಂಡಿದ್ದೇವೆ. ರಾಜರ ಕಾಲದಲ್ಲೇ ಪುತ್ತೂರಿನಲ್ಲಿ ಕಂಬಳ ನಡೆಯುತ್ತಿದ್ದುದು ಪ್ರಶ್ನಾಚಿಂತನೆಯಲ್ಲಿ ಕಂಡು ಬಂದಿದೆ. ಕೆಸರು ಗದ್ದೆ ಓಟವನ್ನು ಮೊದಲ ಬಾರಿಗೆ ಪ್ರಾರಂಭಿಸಲಾಗಿದೆ. ಟೀಕೆಗಳನ್ನು ಲೆಕ್ಕಿಸದೆ ಕಂಬಳವನ್ನು ವಿಜೃಂಭಣೆಯಿಂದ ಮುಂದಿನ ದಿನವೂ ನಡೆಸಲಾಗುವುದು ಎಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಹೇಳಿದರು.
ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯ ಇತಿಹಾಸ ಪ್ರಸಿದ್ಧ ಕೋಟಿಚೆನ್ನಯ ಜೋಡುಕರೆ ಕಂಬಳವನ್ನು ಉದ್ಘಾಟಿಸಿ ಮಾತನಾಡಿದರು.
ರಾಜ್ಯ ಮಟ್ಟದ ಕೆಸರುಗದ್ದೆ ಓಟದ ಸ್ಪರ್ಧೆಗೆ ಪ್ರೊ ಕಬಡ್ಡಿ ಆಟಗಾರ ಪ್ರಶಾಂತ್ ರೈ ಕೈಕಾರ ಹಸಿರು ನಿಸಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಶಾಸಕಿ ಶಕುಂತಳಾ ಟಿ.ಶೆಟ್ಟಿ ವಹಿಸಿದ್ದರು.
ಮಾಜಿ ಸಚಿವ ರಮಾನಾಥ ರೈ, ಡಾ ಎಂ.ಎನ್.ರಾಜೇಂದ್ರ ಕುಮಾರ್, ಶಶಿಕುಮಾರ್ ಬಾಲ್ಯೊಟ್ಟು, ತಹಸೀಲ್ದಾರ್ ಪುರಂದರ, ವಿದ್ಯಾರಶ್ಮಿ ವಿದ್ಯಾಸಂಸ್ಥೆಯ ಸಂಚಾಲಕ ಸೀತಾರಾಮ ರೈ ಸವಣೂರು, ಅಕ್ಷಯ ಕಾಲೇಜು ಸಂಚಾಲಕ ಜಯಂತ ನಡುಬೈಲು, ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾಮ ಬಿ.ಕೆ., ಸಂತ ಫಿಲೊಪಿನಾ ಕಾಲೇಜು ಪ್ರಾಂಶುಪಾಲ ಡಾ.ಆಂಟನಿ ಪ್ರಕಾಶ್ ಮೊಂತೆರೋ, ಕಲ್ಲೇಗ ದೈವಸ್ಥಾನ ಆಡಳಿತ ಮೊಕ್ತೇಸರ ಅಜಿತ್ ಕುಮಾರ್ ಜೈನ್, ಉಪ್ಪಿನಂಗಡಿ ಕಂಬಳ ಸಮಿತಿ ಕೋಶಾಽಕಾರಿ ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು, ಪರ್ಪುಂಜ ಬ್ರಹ್ಮ ಬೈದರ್ಕಳ ಗರಡಿ ಆಡಳಿತ ಮುಕ್ತೇಸರ ಸಂಜೀವ ಪೂಜಾರಿ ಕೂರೇಲು, ಮೌರೀಸ್ ಮಸ್ಕರೇನಿಯಸ್, ಸುಧಾನ ಶಾಲೆಯ ಸಂಚಾಲಕ ವಿಜಯ ಹಾರ್ವಿನ್, ಡಾ.ದರ್ಮಪಾಲ ಗೌಡ, ಪದ್ಮನಾಭ ರೈ ಕಲ್ಲಡ್ಕ ಮತ್ತಿತರರು ಉಪಸ್ಥಿತರಿದ್ದರು.
ಕಂಬಳ ಸಮಿತಿ ಅಧ್ಯಕ್ಷ ಎನ್.ಚಂದ್ರಹಾಸ ಶೆಟ್ಟಿ ಸ್ವಾಗತಿಸಿ ಪ್ರಸ್ತಾವನೆಗೈದರು. ಬಾಲಕೃಷ್ಣ ಪೊರ್ದಾಳ್ ನಿರೂಪಿಸಿದರು.