ಜಿಲ್ಲೆ

ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ

Mangaluru - Nishantha Narayana

ಪುತ್ತೂರು: ಸಿಇಟಿ ಪರೀಕ್ಷಾ ಕೊಠಡಿಗೆ ಹಾಜರಾಗುವ ವೇಳೆ ವಿದ್ಯಾರ್ಥಿಯೋರ್ವನ ಜನಿವಾರವನ್ನು ಅಧಿಕಾರಿಗಳು ಕತ್ತರಿಸಿದ ಘಟನೆ ಖಂಡನೀಯ. ಜನಿವಾರ ಮುಟ್ಟಿದರೆ ಜಾಗ್ರತೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಎಚ್ಚರಿಸಿದ್ದಾರೆ.

ವಿದ್ಯಾರ್ಥಿಯ ಜನಿವಾರ ಕತ್ತರಿಸಿದ ಘಟನೆಯನ್ನು ಕರ್ನಾಟಕ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಅಽಕಾರಿ ವಿರುದ್ಧ ಸರ್ಕಾರ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಲಿದೆ. ದೇಶದ ಸಂಸ್ಕಾರ, ಸಂಸ್ಕೃತಿ, ಪರಂಪರೆಯಾಗಿ ಹಲವು ವಿಚಾರಗಳು ಇಂದಿಗೂ ಉಳಿದಿವೆ. ಅವರವರ ನಂಬಿಕೆ ಆಚಾರ, ವಿಚಾರಗಳನ್ನು ಯಾರೂ ಪ್ರಶ್ನಿಸುವಂತಿಲ್ಲ. ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದೆ ಮತ್ತು ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಮುಂದೆ ಈ ರೀತಿಯ ಘಟನೆ ನಡೆಯದಂತೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.