ಪುತ್ತೂರು: ಕಂಬಳ ಕರೆಯಲ್ಲಿ ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ವಿಚಾರದಲ್ಲಿ ಓರ್ವ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಡಬ ಮೂಲದ ಶಾಕೀರ್ ವಶದಲ್ಲಿರುವ ವ್ಯಕ್ತಿಯಾಗಿದ್ದಾರೆ. ಪುತ್ತೂರು ಮೂಲದ ಅಪ್ರಾಪ್ತ ಬಾಲಕಿಯಾಗದ್ದು, ಕಂಬಳ ನೋಡುವ ಉದ್ದೇಶಕ್ಕೆ ಬಂದ ಸಂದರ್ಭ ದೌರ್ಜನ್ಯ ಎಸಗಿದ್ದಾರೆಂದು ಆರೋಪಿಸಲಾಗಿದೆ.
ಯುವತಿಮೇಲೆ ಕೈ ಹಾಕಿದಾತನನ್ನು ತಮ್ಮ ವಶಕ್ಕೆ ನೀಡಬೇಕೆಂದು ತಂಡವೊಂದು ಠಾಣೆಯ ಮುಂದೆ ಜಮಾಯಿಸಿದೆ. ಉದ್ರಿಕ್ತರನ್ನು ಪುತ್ತಿಲ ಪರಿವಾರ ಸಂಸ್ಥಾಪಕ ಅರುಣ್ ಕುಮಾರ ಪುತ್ತಿಲ ಸಮಾಧಾನಗೊಳಿಸುವ ಕಾರ್ಯ ಮಾಡಿದ್ದಾರೆ. ನಗರ ಠಾಣೆಯಲ್ಲಿ ಪೊಕ್ಸೋ ಪ್ರಕರಣ ದಾಖಲಿಸಲಾಗಿದೆ.