ಅಂಬಿಕಾ ವಿದ್ಯಾಲಯದಲ್ಲಿ ನಡೆದ 21ನೆಯ ತಾಲೂಕು ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆ ಬಿಡುಗಡೆ ಸಮಾರಂಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಂ.ಪಿ.ಶ್ರೀನಾಥ್ ಮಾತನಾಡಿದರು. 
ಜಿಲ್ಲೆ

ಪುತ್ತೂರು ಅನೇಕ ಕಾರ್ಯಚಟುವಟಿಕೆಗಳ ತವರೂರು, ಪುತ್ತೂರು ತಾಲೂಕು ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆ ಬಿಡುಗಡೆ ಸಮಾರಂಭದಲ್ಲಿ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಂ.ಪಿ.ಶ್ರೀನಾಥ್

Shravan Kumar Nala

ಪುತ್ತೂರು: ಪುತ್ತೂರು ಅನೇಕ ಕಾರ್ಯಚಟುವಟಿಕೆಗಳ ತವರೂರು. ಈ ಪ್ರದೇಶದಲ್ಲಿ ಸೆ. 29 ಹಾಗೂ 30ರಂದು ಆಯೋಜನೆಗೊಳ್ಳಲಿರುವ ತಾಲೂಕು ಸಾಹಿತ್ಯ ಸಮ್ಮೇಳನ ಹಲವು ಆಯಾಮಗಳಿಂದ ಪ್ರಸ್ತುತಗೊಳ್ಳುತ್ತಿದೆ ಮಾತ್ರವಲ್ಲದೆ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆ ಮುಂದೆ ಸಾಹಿತ್ಯ ಸಮ್ಮೇಳನ ಆಯೋಜಿಸುವವರಿಗೆ ಮಾದರಿಯಾಗಿ ಮೂಡಿಬಂದಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಂ.ಪಿ.ಶ್ರೀನಾಥ್ ಹೇಳಿದರು.
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇಯಲ್ಲಿ 21ನೆಯ ತಾಲೂಕು ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದರು.
ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಬಿ.ಪುರಂದರ ಭಟ್ ಮಾತನಾಡಿ, ಇಂದು ಅಕ್ಷರ ಕ್ಷರವಾಗುತ್ತಿರುವ ಕಾಲಘಟ್ಟದಲ್ಲಿದ್ದೇವೆ. ಹಾಗಾಗಿ ಅಕ್ಷರಗಳನ್ನು ಹೆಚ್ಚು ಹೆಚ್ಚು ಬಿಡುಗಡೆ ಮಾಡಬೇಕಿದೆ. ಮುಚ್ಚಿಡುವ ಪ್ರಕ್ರಿಯೆಗಿಂತ ತೆರೆದಿಡುವ ಪ್ರಕ್ರಿಯೆ ಸಮಾಜಕ್ಕಿಂದು ಬೇಕಾಗಿದೆ ಎಂದರು.
ಈ ಬಾರಿಯ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಡಾ. ಶ್ರೀಧರ ಎಚ್.ಜಿ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಉಮೇಶ್ ನಾಯಕ್, ಸಮ್ಮೇಳನ ಆಯೋಜಕರಾದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ, ವಿಶ್ರಾಂತ ಪ್ರಾಚಾರ್ಯ ಪ್ರೊ. ಎ.ವಿ.ನಾರಾಯಣ, ವಿಶ್ರಾಂತ ಪ್ರಾಧ್ಯಾಪಕ ಪ್ರೊ ವಿ.ಬಿ.ಅರ್ತಿಕಜೆ ಉಪಸ್ಥಿತರಿದ್ದರು.
ಪುತ್ತೂರು ಕನ್ನಡ ಸಾಹಿತ್ಯ ಪರಿಷತ್‌ನ ಗೌರವ ಕೋಶಾಧ್ಯಕ್ಷ ಡಾ. ಹರ್ಷಕುಮಾರ್ ರೈ ಉಪಸ್ಥಿತರಿದ್ದರು. ಸಾಹಿತ್ಯ ಪರಿಷತ್‌ನ ನಿಕಟಪೂರ್ವ ಅಧ್ಯಕ್ಷ ಬಿ.ಐತ್ತಪ್ಪ ನಾಯ್ಕ ಕಾರ್ಯಕ್ರಮ ನಿರ್ವಹಿಸಿದರು.