oppo_0 
ಜಿಲ್ಲೆ

ಶ್ರೀ ಮಹಾಲಿಂಗೇಶ್ವರ ಸನ್ನಿಽಯಲ್ಲಿ ವಿಶೇಷ ಪೂಜೆ

Mangaluru - Nishantha Narayana


ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ನಡೆಯಿತು.ದೇವಸ್ಥಾನದ ಆಡಳಿತಾಽಕಾರಿ ನವೀನ್ ಭಂಡಾರಿ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ವಿಧಾನ ಪರಿಷತ್ ಮಾಜಿ ಸದಸ್ಯ ಅಣ್ಣ ವಿನಯಚಂದ್ರ ಧಾರ್ಮಿಕ ಉಪನ್ಯಾಸ ನೀಡಿದರು. ಬಳಿಕ ಮಹಾಪೂಜೆ ನಡೆಯಿತು. ಭಕ್ತರಿಗೆ ಪ್ರಸಾದ ರೂಪದಲ್ಲಿ ಸೀರೆ ವಿತರಿಸಲಾಯಿತು.


ಡ್ಯಾಶ್ ಮಾರ್ಕೆಟಿಂಗ್ ಸಂಸ್ಥೆಯ ನಿರ್ದೇಶಕಿ ನಳಿನಿ ಪಿ ಶೆಟ್ಟಿ, ಜಯಶ್ರೀ ಈಶ್ವರ ಭಟ್ ಪಂಜಿಗುಡ್ಡೆ, ಅನ್ನಪೂರ್ಣಿಮಾ ಆರ್ ರೈ ಕುತ್ಯಾಡಿ ಮಾತನಾಡಿದರು. ಸಮಿತಿ ಕಾರ್ಯದರ್ಶಿ ಸುಜಯಾ, ಸದಸ್ಯೆ ಶಾರದಾ ಅರಸ್, ಒಡಿಯೂರು ವಜ್ರಮಾತಾ ಮಹಿಳಾ ವಿಕಾಸ ಸೇವಾ ಕೇಂದ್ರ ಪುತ್ತೂರು ಘಟಕದ ಅಧ್ಯಕ್ಷೆ ನಯನಾ ರೈ, ಸ್ವರ್ಣಲತಾ ಹೆಗ್ಡೆ ಉಪಸ್ಥಿತರಿದ್ದರು.


ಸಮಿತಿ ಅಧ್ಯಕ್ಷೆ ಶುಭಮಾಲಿನಿ ಮಲ್ಲಿ ಸ್ವಾಗತಿಸಿದರು. ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಪ್ರಾಸ್ತಾವನೆಗೈದರು. ಸಮರ್ಪಣಾ ಮಹಿಳಾ ಸೇವಾ ಸಂಸ್ಥೆಯ ಅಧ್ಯಕ್ಷೆ ಗಂಗಾರತ್ನ ವಿ ರೈ ವಂದಿಸಿದರು. ವಕೀಲೆ ಹರಿಣಾಕ್ಷಿ ಜೆ.ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.