ಪುತ್ತೂರು: ಸ್ಪರ್ಧಾತ್ಮಕ ಜಗತ್ತಿನಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಜತೆ ಹೊಂದಿಕೊಂಡು ಮುಂದುವರಿಯುವುದು ಅತ್ಯಗತ್ಯ. ಪದವಿಪೂರ್ವ ಹಂತದಲ್ಲೇ ವಿದ್ಯಾರ್ಥಿಗಳನ್ನು ಕೌಶಲಪೂರ್ಣರಾಗಿಸುವ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಯತ್ನ ಶ್ಲಾಘನೀಯ ಎಂದು ವಿವೇಕಾನಂದ ಇನ್‌ಸ್ಟಿಟ್ಯೂಟ್ ಆಫ್ ಫಾರ್ಮಾಸುಟಿಕಲ್ ಸೈನ್ಸ್‌ನ ಪ್ರಾಂಶುಪಾಲ ಡಾ. ಗುರುರಾಜ ಎಂ. ಪಿ. ಹೇಳಿದರು.
ವಿವೇಕಾನಂದ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ಉಪನ್ಯಾಸಕರಿಗೆ ಟ್ಯಾಲಿ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲ ಮಹೇಶ್ ನಿಟಿಲಾಪುರ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲ ದೇವಿಚರಣ್ ರೈ, ಟ್ಯಾಲಿ ತರಬೇತುದಾರರಾದ ರಕ್ಷಾ ನಾಯಕ್ ಮಂಗಳೂರು ಉಪಸ್ಥಿತರಿದ್ದರು.
ವಾಣಿಜ್ಯ ವಿಭಾಗದ ಮುಖ್ಯಸ್ಥ ದೇವಿಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕರು ಸಹಕರಿಸಿದರು.
ಎರಡು ದಿನಗಳ ತರಬೇತಿ : ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಸ್ತುತ ವರ್ಷದಿಂದ ವಾಣಿಜ್ಯ ವಿದ್ಯಾರ್ಥಿಗಳಿಗೆ ಕಂಪ್ಯೂಟರ್, ಷೇರು ಮಾರುಕಟ್ಟೆ ಮತ್ತು ಟ್ಯಾಲಿ ವಿಷಯಗಳ ಬಗ್ಗೆ ಸರ್ಟಿಫಿಕೇಟ್ ಕೋರ್ಸ್ ಪ್ರಾರಂಭಿಸಲಾಗಿದೆ. ಈ ನಿಟ್ಟಿನಲ್ಲಿ ವಿವಿಧ ಹಂತಗಳಲ್ಲಿ ಉಪನ್ಯಾಸಕರಿಗೆ ತರಬೇತಿ ಕಾರ್ಯಾಗಾರಗಳನ್ನು ನಡೆಸಲಾಗುತ್ತಿದೆ.