ಪೈಥಾನ್ ಪ್ರೋಗ್ರಾಮಿಂಗ್ ಕುರಿತು ಒಂದು ದಿನದ ಕಾರ್ಯಾಗಾರ ಬಂಟಕಲ್ಲು ಕಾಲೇಜಿನಲ್ಲಿ ಇತ್ತೀಚೆಗೆ ನಡೆಯಿತು 
ಜಿಲ್ಲೆ

ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಪೈಥಾನ್ ಪ್ರೋಗ್ರಾಮಿಂಗ್ ಕಾರ್ಯಾಗಾರ

ಇಂದಿರಾ ಎನ್ ಕೆ

ವಿಜಯವಾಣಿ ಸುದ್ದಿಜಾಲ ಶಿರ್ವ

ಪೈಥಾನ್ ಪ್ರೋಗ್ರಾಮಿಂಗ್ ಕಾರ್ಯಾಗಾರದ ಮುಖ್ಯ ಉದ್ದೇಶ ಶಿಕ್ಷಕರ ಜ್ಞಾನ ವೃದ್ಧಿ. ಶಿಕ್ಷಕರು ಇದರ ಪ್ರಯೋಜನ ಪಡೆದರೆ ವಿದ್ಯಾರ್ಥಿಗಳಿಗೂ ಅನುಕೂಲ ಎಂದು ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಾರುತಿ ಹೇಳಿದರು.

ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜಿನ ಗಣಕಯಂತ್ರ ವಿಭಾಗದ ಉಪನ್ಯಾಸಕರ ಒಕ್ಕೂಟದಿಂದ ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಪೈಥಾನ್ ಪ್ರೋಗ್ರಾಮಿಂಗ್ ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಪ್ರಾಧ್ಯಾಪಕ ಡಾ.ತಿರುಮಲೇಶ್ವರ ಭಟ್ ಅಧ್ಯಕ್ಷತೆ ವಹಿಸಿದ್ದರು. ಆನಂದತೀರ್ಥ ಮಹಾವಿದ್ಯಾಲಯ ಉಪಪ್ರಾಂಶುಪಾಲೆ ಕಮಲಾಕ್ಷಿ ಉಪಸ್ಥಿತರಿದ್ದರು.
ಪ್ರಾಧ್ಯಾಪಕ ಅರುಣ್ ಉಪಾಧ್ಯಾಯ ಕಾರ್ಯಕ್ರಮ ಸಂಯೋಜಿಸಿದರು. ಪ್ರಾಧ್ಯಾಪಕರಾದ ಡಾ.ರಂಜನ್ ಕುಮಾರ್, ಡಾ.ಗಣೇಶ್ ಪ್ರಸಾದ್ ಮತ್ತು ಯಶಸ್ವಿನಿ ಎ.ಎಸ್ ಸಂಪನ್ಮೂಲ ವ್ಯಕ್ತಿಗಳಾಗಿದ್ದರು. ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜು ಗಣಕಯಂತ್ರ ವಿಭಾಗದ ಉಪನ್ಯಾಸಕರ ಒಕ್ಕೂಟ ಅಧ್ಯಕ್ಷ ಶ್ರೀರಾಮ ನಾಯಕ್ ಸ್ವಾಗತಿಸಿದರು.

ಪದವಿ ಪೂರ್ವ ಮಂಡಳಿ ಈ ಮೊದಲು ಆಯೋಜಿಸಿದ್ದ ಕಾರ್ಯಕ್ರಮಗಳಿಗೆಲ್ಲ ಸಂಸ್ಥೆ ಸತತ ಬೆಂಬಲ ನೀಡಿದೆ. ಆಧುನಿಕ ತಂತ್ರಜ್ಞಾನದ ಜ್ಞಾನ ವೃದ್ಧಿಸಿಕೊಂಡು ಶಿಕ್ಷಕರು ವಿದ್ಯಾರ್ಥಿಗಳಿಗೆ ಬೋಧನೆ ಮಾಡಬೇಕು.
ಡಾ.ತಿರುಮಲೇಶ್ವರ ಭಟ್ ಪ್ರಾಧ್ಯಾಪಕ